ಸೋಮವಾರಪೇಟೆ: ಬಾಣವಾರ ರಸ್ತೆಯಲ್ಲಿರುವ ಎಸ್‍ಜೆಎಂ ಬಾಲಿಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ತಾ.ಪಂ. ಸದಸ್ಯೆ ಹೆಚ್.ಎನ್. ತಂಗಮ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.ಶನಿವಾರಸಂತೆ: ಸರ್ಕಾರದ ಉಚಿತ ಸೈಕಲ್ ಸೌಲಭ್ಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತ್‍ಕುಮಾರ್ ಅಭಿಪ್ರಾಯಪಟ್ಟರು.

ಸ್ಥಳೀಯ ವಿಘ್ನೇಶ್ವರ ಪ್ರೌಢಶಾಲೆಯಲ್ಲಿ ಸರಕಾರದ ವತಿಯಿಂದ ನೀಡಲಾಗುವ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ಮಾತನಾಡಿ, ವಿದ್ಯಾರ್ಥಿನಿಯರು ಕಲಿಕಾ ಗುಣಮಟ್ಟ ಸುಧಾರಿಸಿಕೊಳ್ಳುವ ಮೂಲಕ ಸರ್ಕಾರದ ಉತ್ತಮ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲಪಿಸುವಲ್ಲಿ ಯಶಸ್ವಿಯಾಗಿದ್ದು, ಸದುಪಯೋಗವಾಗಿದೆ ಎಂದರು.

ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಎನ್. ಬೆಳ್ಳಿಯಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ಕೃಷ್ಣರಾಜ್, ಸಮಿತಿ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಬಾನು ರಿಜ್ವಾನ್, ಸದಸ್ಯರು, ಪ್ರಾಂಶುಪಾಲ ಶಿವಪ್ರಕಾಶ್, ಶಿಕ್ಷಕರಾದ ಕೆ.ಪಿ. ಜಯಕುಮಾರ್, ಅಂಜನಪ್ಪ, ಇತರ ಶಿಕ್ಷಕರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಸರಕಾರ ಮಕ್ಕಳ ವಿದ್ಯಾರ್ಜನೆಗೆ ಉಚಿತ ಪುಸ್ತಕ, ಅಕ್ಷರ ದಾಸೋಹದಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಹಾಗೂ ಸೈಕಲ್ ಸೇರಿದಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಜಿ.ಪಂ. ಸದಸ್ಯ ಪಿ.ಎಂ. ಲತೀಫ್ ಹೇಳಿದರು.

ಕೊಡಗರಹಳ್ಳಿ ನಾಡು ಪ್ರೌಢಶಾಲೆಯಲ್ಲಿ 8ನೇ ತರಗತಿ ಮಕ್ಕಳಿಗೆ ಸರಕಾರದಿಂದ ನೀಡಲಾಗುತ್ತಿರುವ ಬೈಸಿಕಲ್ ವಿತರಿಸಿ ಮಾತನಾಡಿದರು. ಕೊಡಗರಹಳ್ಳಿ ನಾಡು ಪ್ರೌಢಶಾಲೆಯ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಸ್.ಬಿ. ಶಂಕರ್, ಕಾರ್ಯದರ್ಶಿಗಳಾದ ಕೆ.ಎಸ್. ಮಂಜುನಾಥ್, ಉಪಾಧ್ಯಕ್ಷೆ ಮೀನಾ ಸೋಮಯ್ಯ, ಸದಸ್ಯರುಗಳಾದ ಕುಟ್ಟಪ್ಪ, ಪುರುಷೋತ್ತಮ ರೈ, ಶಾಲಾ ಮುಖ್ಯ ಶಿಕ್ಷಕಿ ಇಂದಿರಾ, ಸಹ ಶಿಕ್ಷಕ, ಶಿಕ್ಷಕಿಯರು ಪೋಷಕರು ಹಾಜರಿದ್ದರು.ಶಾಂತಳ್ಳಿ: ಸಮೀಪದ ಶಾಂತಳ್ಳಿ ಬೆಟ್ಟದಳ್ಳಿಯ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಂಜೂರಾದ ಸೈಕಲ್‍ಗಳನ್ನು ಗ್ರಾ.ಪಂ. ಅಧ್ಯಕ್ಷೆ ಪವಿತ್ರ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ಸುಂದರ್ ವಹಿಸಿದ್ದರು. ಬೆಟ್ಟದಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಕುಮಾರಿ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಎಂ. ದಿನೇಶ್, ಮುಖ್ಯ ಶಿಕ್ಷಕಿ ಬಿ.ಟಿ. ರತ್ನಾವತಿ, ಶಿಕ್ಷಕ ಶಿವಾನಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.ಆಲೂರು-ಸಿದ್ದಾಪುರ: ಸರ್ಕಾರ ಸರ್ಕಾರಿ ಶಾಲೆಗಳಿಗೆ ಅನೇಕ ಸೌಲಭ್ಯಗಳು ನೀಡಿದರೂ ಸಹ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸೇರದೆ ಇರುವದು ವಿಷಾದನೀಯ ಎಂದು ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಅಭಿಪ್ರಾಯಪಟ್ಟರು.

ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯಲ್ಲಿ ಸರಕಾರದಿಂದ ನೀಡುವ ಉಚಿತ ಸೈಕಲ್‍ಗಳನ್ನು ಎಂಟನೆ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ನಿರ್ದೇಶಕ ಎಸ್.ಪಿ ರಾಜು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಎನ್.ಬಿ. ನಾಗಪ್ಪ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಹೆಚ್.ಪಿ. ಶೇಶಾದ್ರಿ, ನಿರ್ದೇಶಕರುಗಳಾದ ಮಹಮ್ಮದ್ ಪಾಷ, ಅಪ್ಪಸ್ವಾಮಿ, ಆನಂದ್, ಬಿ.ಕೆ. ಚಿಣ್ಣಪ್ಪ, ಶಾಲಾ ಮುಖ್ಯ ಶಿಕ್ಷಕ ನರಸಿಂಹ ಮೂರ್ತಿ, ಶನಿವಾರಸಂತೆ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಕುಮಾರ್ ಮುಂತಾದವರಿದ್ದರು.