ಸೋಮವಾರಪೇಟೆ, ಜೂ. 29: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ರೋಟರಿ ಸಂಸ್ಥೆ ಆಶ್ರಯದಲ್ಲಿ ವಿಶೇಷಚೇತನ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಶಿಬಿರಕ್ಕೆ ಚಾಲನೆ ನೀಡಿದರು. 6 ರಿಂದ 16 ವರ್ಷದೊಳಗಿನ 95 ಮಂದಿ ಶಿಬಿರದಲ್ಲಿ ಚಿಕಿತ್ಸೆ ಪಡೆದುಕೊಂಡರು. ಮೂಳೆ ತಜ್ಞ ಶರತ್‍ಬಾಬು, ಮನೋವೈದ್ಯ ಸತೀಶ್ ಕುಮಾರ್, ನೇತ್ರತಜ್ಞ ಕಿರಣ್ ಭಟ್, ಕಿವಿ ಗಂಟಲು ಮೂಗು ತಜ್ಞ ಮಂಜುನಾಥ್ ಚಿಕಿತ್ಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ತಾಪಂ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಜಿಪಂ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಪಂ ಸದಸ್ಯೆ ಎಚ್.ಎನ್.ತಂಗಮ್ಮ, ರೋಟರಿ ಸಂಸ್ಥೆಯ ಯಶವಂತ್, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸಿ.ಬಿ.ಭಾಗ್ಯಲಕ್ಷ್ಮಿ, ವಿಶೇಷ ಸಂಪನ್ಮೂಲ ವ್ಯಕ್ತಿ ಕೇಶವ ಮೂರ್ತಿ ಮತ್ತಿತರರು ಇದ್ದರು.