ಮಡಿಕೇರಿ, ಜೂ. 29: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕುಶಾಲನಗರದ ಸುದ್ದಿ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಜು. 1 ರಂದು ದುಬಾರೆ ಇನ್ ಹೊಟೇಲ್ ಸಭಾಂಗಣದಲ್ಲಿ ಸಂವಾದ ಹಾಗೂ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಂವಾದ ಕಾರ್ಯಕ್ರಮ ದಲ್ಲಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಆನೆ ಮತ್ತು ಮಾನವ ಸಂಘರ್ಷ ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಕುರಿತು ಸಂವಾದ ನಡೆಸಲಿದ್ದಾರೆಂದು ಕೊಡಗು ಜಿಲ್ಲಾ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಕುಶಾಲನಗರ ಸುದ್ದಿ ಸೆಂಟರ್ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯನ್ನು ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕ ಪ್ರೊ.ಧರ್ಮ ಉದ್ಘಾಟಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಮನೋಜ್‍ಕುಮಾರ್, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉದ್ಯಮಿ ರತೀಶ್, ದುಬಾರೆ ರಿವರ್ ರ್ಯಾಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ.