ವೀರಾಜಪೇಟೆ, ಜು. 1: ಗಿಡ ನೆಡುವದು ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವದರ ಬಗ್ಗೆ ಶಾಲಾ ಮಕ್ಕಳಿಗೂ ಹೆಚ್ಚಿನ ಮಾಹಿತಿ ನೀಡಬೇಕಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಸದಾÀಶಿವÀ ಗೌಡ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಡಂಗ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸದಾಶಿವ ಗೌಡ ಆರೋಗ್ಯವಂತ ಬದುಕನ್ನು ಸಾಗಿಸಲು ಪರಿಸರವನ್ನು ಉಳಿಸಿ ಬೆಳೆಸುವದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ತಂಗಮ್ಮ ಮಾತನಾಡಿ ಉತ್ತಮ ಗಾಳಿ, ಮಳೆ, ಬೆಳೆ ಸಾಧ್ಯ ಎಂದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ವನಿತಾ, ಉಪಾಧ್ಯಕ್ಷ ಅಶ್ರಫ್, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

ಪ್ರಗತಿ ಬಂದು, ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕೆÀ್ಷ ಅನಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಕ್ಕೂಟದ ಕಾರ್ಯದರ್ಶಿ ರೇಖಾ ಸ್ವಾಗತಿಸಿದರು. ಯೋಜನೆಯ ವಲಯ ಮೇಲ್ವಿಚಾರಕ ಎಸ್.ರವೀಂದ್ರ ಅವರು ನಿರೂಪಿಸಿದರೆ. ಸೇವಾಪ್ರತಿನಿಧಿ ತೇಜಸ್ವಿನಿ ವಂದಿಸಿದರು.