ಶ್ರೀಮಂಗಲ, ಜು. 1: ನೂತನವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವ ಮುಖಂಡ ಮುಕ್ಕಾಟಿರ ಶಿವು ಮಾದಪ್ಪ, ಅವರು ನಾಗರಹೊಳೆ ನಾಣಚ್ಚಿಗೇಟ್ ಮೂಲಕ ಜಿಲ್ಲೆಗೆ ಆಗಮಿಸಿದ ಸಂದರ್ಭ ನೂರಾರು ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು.

ಬಳಿಕ ಕುಟ್ಟ ಪಟ್ಟಣದಲ್ಲಿ ವಿಜಯೋತ್ಸವ ನಡೆಸಿ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದÀರ್ಭ ಮಾತನಾಡಿದ ಶಿವು ಮಾದಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ್, ಅಧ್ಯಕ್ಷ ಸ್ಥಾನ ನೀಡಿದ್ದು, ಜಿಲ್ಲೆಯಲ್ಲಿ ಯಾವದೇ ಜಾತಿ ರಾಜಕೀಯಕ್ಕೆ ಅವಕಾಶ ನೀಡದೆ ಎಲ್ಲರನ್ನು ಒಗ್ಗೂಡಿಸಿ ಪಕ್ಷದ ಎಲ್ಲಾ ಮುಖಂಡರ ಆಶೀರ್ವಾದದೊಂದಿಗೆ ಎಲ್ಲಾ ಕಾರ್ಯಕರ್ತರ ಸಲಹೆ, ವಿಶ್ವಾಸ ಗಳಿಸಿ ಪಕ್ಷದ ಬಲವರ್ಧನೆ ಮಾಡಲು ಆದ್ಯತೆ ನೀಡಲಾಗುವದು. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡು ವಿಧಾನಸಭಾ ಸ್ಥಾನ ಗೆಲ್ಲುವದು ಪಕ್ಷದ ಗುರಿ ಎಂದರು.

ಜಿ.ಪಂ. ಸದಸ್ಯ ಬಾನಂಡ ಪ್ರಥ್ಯು, ತಾ.ಪಂ. ಸದಸ್ಯ ಪಲ್ವೀನ್ ಪೂಣಚ್ಚ, ಕಾನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕಾಡ್ಯಮಾಡ ಬೋಪಣ್ಣ, ಬಿರುನಾಣಿ ವಲಯ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಟಿ.ಶೆಟ್ಟಿಗೇರಿ ಗ್ರಾ.ಪಂ. ಸದಸ್ಯ ಚೊಟ್ಟೆಯಂಡಮಾಡ ಉದಯ, ಪೊನ್ನಂಪೇಟೆ ಗ್ರಾ.ಪಂ. ಸದಸ್ಯ ಅಣ್ಣೀರ ಎಂ.ಹರೀಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪೊಕುಟ್ಟಿ, ಹಾತೂರು ವಲಯ ಅಧ್ಯಕ್ಷ ರಾಮಚಂದ್ರ, ಅನಿತಾ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಿ.ಎನ್. ಪ್ರಕಾಶ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಆಲೀರ ಸಾದಲಿ, ಟಿ.ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಚೊಟ್ಟೆಯಂಡಮಾಡ ವಿಶು, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕೊಲ್ಲೀರ ಬೋಪಣ್ಣ, ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿರ್ದೇಶಕ ಚಕ್ಕೇರ ವಾಸು ಕುಟ್ಟಪ್ಪ, ಪೊನ್ನಂಪೇಟೆ ಬ್ಲಾಕ್ ಮಹಿಳಾ ಘಟಕ ಅಧ್ಯಕ್ಷೆ ಕಡೇಮಾಡ ಕುಸುಮ, ಖಾದಿ ನಿಗಮದ ರಾಜ್ಯ ನಿರ್ದೇಶಕ ಕೊಕ್ಕಂಡ ರೂಪ ಭೀಮಯ್ಯ, ಕುಟ್ಟ ಗ್ರಾ.ಪಂ. ಅಧ್ಯಕ್ಷೆ ಲೀಲಾ ಪ್ರಭು, ಉಪಾಧ್ಯಕ್ಷ ಪ್ರಕಾಶ್ ಉತ್ತಪ್ಪ, ಕಾರ್ಮಿಕ ಸಂಘದ ಅಧ್ಯಕ್ಷ ನಾಗರಾಜು, ಯುವ ಘಟಕದ ಅಧ್ಯಕ್ಷ ಜಮ್ಮಡ ಸೋಮಣ್ಣ, ಪೊನ್ನಂಪೇಟೆ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಪು, ಪೊನ್ನಂಪೇಟೆ ಬ್ಲಾಕ್ ಯುವ ಘಟಕದ ಅಧ್ಯಕ್ಷ ಮಚ್ಚಮಾಡ ಸಜನ್, ಗೋಣಿಕೊಪ್ಪ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀಂಮುಲ್ಲಾ, ಡಿ.ಸಿ.ಸಿ. ಸದಸ್ಯ ಸಮೀರ್, ಪೊನ್ನಂಪೇಟೆ ಗ್ರಾ.ಪಂ. ಸದಸ್ಯ ಹ್ಯಾರಿಸ್, ಅನೀಶ್, ಮಂಜು, ರಷೀದ್, ಪೊನ್ನಂಪೇಟೆ ಬ್ಲಾಕ್ ಉಪಾಧ್ಯಕ್ಷ ಸಮ್ಮದ್, ಕಲ್ಲುಕೋರೆ ಬಾಪುಟ್ಟಿ, ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಡೇಮಾಡ ಅಶೋಕ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೊಕ್ಕಂಡ ಅಪ್ಪಣ್ಣ, ಟಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಪೆಮ್ಮಂಡ ರಾಜ, ಕೇರಳ ವಯನಾಡಿನ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಶಾಂತ್, ಪೊನ್ನಂಪೇಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಮತ್ರಂಡ ದಿಲ್ಲು, ಮತ್ತಿತರರು ಹಾಜರಿದ್ದರು.