ಮಡಿಕೇರಿ, ಜು. 1: ಪ್ರಸಕ್ತ ಸಾಲಿನ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ)ನಲ್ಲಿ ಅರ್ಜಿಗಳನ್ನು ಅಳವಡಿಸಿ ಪ್ರತಿಯನ್ನು 2 ಸೆಟ್‍ನಲ್ಲಿ ದಾಖಲಾತಿಗಳೊಂದಿಗೆ ಈ ಕಚೇರಿಗೆ ಸಲ್ಲಿಸುವದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿ ಸಂಪರ್ಕಿಸುವದು. ದೂರವಾಣಿ ಸಂಖ್ಯೆ: 08272-228431. ಅರ್ಜಿಯನ್ನು ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಸ್ವ ಉದ್ಯೋಗ ಕಲ್ಪಿಸಲು

ಪ್ರಸಕ್ತ ಸಾಲಿನಲ್ಲಿ ಆಧುನೀಕರಣ ತಾಂತ್ರಿಕ ತರಬೇತಿ ಯೋಜನೆಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವ ಉದ್ಯೋಗ ಕಲ್ಪಿಸಲು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿ ಡೊಮೆಸ್ಟಿಕ್ ಎಲೆಕ್ಟ್ರಿಕಲ್ ಅಪ್ಲಯನ್ಸ್‍ಸ್ ರಿಪೇರಿ ಹಾಗೂ ಕಂಪ್ಯೂಟರ್ ಬೇಸಿಕ್ ಟ್ಯಾಲಿ ಕಸುಬಿನಲ್ಲಿ ಒಂದು ತಿಂಗಳ ಅವಧಿಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಾ. 10 ರೊಳಗೆ ಅರ್ಜಿಯನ್ನು ಕಚೇರಿಯಿಂದ ಹಾಗೂ ಕಾರ್ಪೋರೇಷನ್ ಬ್ಯಾಂಕ್, ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ ಅವರಿಂದ ಪಡೆದು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ (ದೂರವಾಣಿ ಸಂಖ್ಯೆ: 08272-228431) ಹಾಗೂ ಕಾರ್ಪೋರೇಷನ್ ಬ್ಯಾಂಕ್, ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ (ದೂರವಾಣಿ ಸಂಖ್ಯೆ : 08276-278730) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಆಯ್ಕೆಗಾಗಿ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ಟ್ಯಾಕ್ಸಿ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ರೂ. 2 ಲಕ್ಷಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ವಿವಿಧ ಯೋಜನಾ ವರ್ಷಗಳಲ್ಲಿ ಬಾಕಿ ಉಳಿದಿರುವ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ದಾಖಲಾತಿಗಳೊಂದಿಗೆ ದ್ವಿಪ್ರತಿಗಳಲ್ಲಿ ತಾ. 20 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.