ಸೋಮವಾರಪೇಟೆ, ಜು. 2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಳ್ಳಿ ವಲಯದ ವತಿಯಿಂದ ಕಲ್ಕಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಾನಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮಾತನಾಡಿ, ಇಂದು ಹವಾಮಾನದಲ್ಲಾಗುತ್ತಿರುವ ವೈಪರೀತ್ಯದಿಂದಾಗಿ ಸಮಸ್ಯೆಯನ್ನು ಎದುರಿಸುವಂತಾಗಿದೆ.

ಈ ನಿಟ್ಟಿನಲ್ಲಿ ಪರಿಸರವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿüಕಾರಿ ರವೀಶ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿಯೇ ಪರಿಸರದ ಬಗೆಗಿನ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕು. ಇದೀಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪರಿಸರ ರಕ್ಷಣೆಯ ಬಗೆಗಿನ ಕಾಳಜಿಯನ್ನು ಹೊತ್ತು ರಾಜ್ಯಾದ್ಯಂತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿರುವದು ಶ್ಲಾಘನೀಯ ಎಂದರು.

ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಳ್ಳಿ ವಲಯದ ಮೇಲ್ವಿಚಾರಕಿ ರೇವತಿ ಆರ್. ಶೆಟ್ಟಿ, ಕಲ್ಕಂದೂರು ಒಕ್ಕೂಟದ ಅಧ್ಯಕ್ಷೆ ಇಂದಿರಾ, ಉಪಾಧ್ಯಕ್ಷ ಶಿವಕುಮಾರ್, ಯೋಜನೆಯ ಸೇವಾ ಪ್ರತಿನಿಧಿಗಳಾದ ನಿಖಿತಾ, ಪುಷ್ಪಾವತಿ, ನವ್ಯಶ್ರೀ, ಶಶಿಕುಮಾರ್, ಸುನಿತಾ ಇದ್ದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಒಕ್ಕೂಟದ ಸದಸ್ಯರು, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸದಸ್ಯರುಗಳು ಪಾಲ್ಗೊಂಡಿದ್ದರು.