ಸೋಮವಾರಪೇಟೆ, ಜು. 2: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಸ್ಥಳೀಯ ರಾಮಮಂದಿ ರದಲ್ಲಿ ನಡೆಯಿತು.ಕುರುಹಿನ ಶೆಟ್ಟಿ ಸಮಾಜದ ಅಧ್ಯಕ್ಷ ಬಿ.ಎಸ್. ರಾಮಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 53 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ನಾಲ್ವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಪ್ರೊ. ಸಿ.ಪಿ. ಧರ್ಮಪ್ಪ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಸಮಯದಲ್ಲಿ ಮೊಬೈಲ್ ಹಾಗೂ ದೂರದರ್ಶನ ಗಳಿಂದ ದೂರವಿರಬೇಕು. ಶ್ರದ್ಧೆಯಿಂದ ಓದಿನ ಕಡೆ ಆಸಕ್ತಿ ವಹಿಸಬೇಕು. ಸಮುದಾಯದ ಸ್ಥಿತಿವಂತರು ತಮ್ಮ ಸಮುದಾಯದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಸಮಿತಿಯ ಪದಾಧಿಕಾರಿಗಳಾದ ವಿಜಯಲಕ್ಷ್ಮೀ ಸುರೇಶ್, ಮನು ಚಂದ್ರಾಜು, ಬಿ.ಎಸ್. ಅನಂತರಾಮ್, ಬಿ.ಬಿ. ಮೋಹನ್, ಎನ್.ಎನ್. ರಮೇಶ್, ಮಂಜುನಾಥ್ ಬಿ.ಎನ್., ಬಿ.ಸಿ. ರೇವಣ್ಣ, ಸೀತಾ ಬಳಗದ ಅಧ್ಯಕ್ಷೆ ಉಮಾ ಗಣಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.