ಮಡಿಕೇರಿ, ಜು. 2: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿ ಇವರು ಒದಗಿಸಿದ ಅನುದಾನದಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳಾದ ಬೈರಾಗಿ (ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಶಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಳಿ, ಪುಲ್‍ಮಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ಶಿಕಾರಿ, ಪಾಂಗ್ಯುಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು, ವಾಸುದೇವ್, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ (ಬುರ್‍ಬುರ್‍ಚ), ಹಾವಗಾರ್ (ಹಾವಾಡಿಗಾರ್), ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್)ಬುಂಡಬೆಸ್ತ, ಕಟಬು, ದರ್ವೆಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಬೈಲ್‍ಪತರ್ ಈ ಸಮುದಾಯಗಳ ಅಭಿವೃದ್ದಿಗೆ ಸೌಲಭ್ಯ ಒದಗಿಸಲು ನಿಗಮವು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳಲ್ಲಿ, 2017-18ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸಾಲ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ. ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನಕೊಳ್ಳಲು ಸಹಾಯಧನ. ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ. ವೃತ್ತಿ ತರಬೇತಿ ಯೋಜನೆ ಈ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಲ್ಲಿ ಶೇ. 50 ರಷ್ಟು ಗೊಲ್ಲ ಸಮುದಾಯಕ್ಕೆ ಹಾಗೂ ಶೇ. 50 ರಷ್ಟು ಇತರ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಲಾಗುವದು.

ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಆಯಾ ಜಿಲ್ಲೆಯ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾಯ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಲು ತಾ. 15 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಕೊನೆಯ ದಿನಾಂಕ ತಾ. 31 ನಿಗದಿಪಡಿಸಿದೆ. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವದಿಲ್ಲ. ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಮತ್ತು ಕಚೇರಿ ವೇಳೆಯಲ್ಲಿ ನಿಗಮದ ದೂರವಾಣಿ ಸಂಖ್ಯೆ: 08272-221656 ಮುಖಾಂತರ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ ಪಡೆಯಲು

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2017-18 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ: ಪ್ರಥಮ ಪಿ.ಯು.ಸಿ. ಮತ್ತು ದ್ವಿತೀಯ ಪಿ.ಯು.ಸಿ. (ಈಡಿesh) ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31.8.2017 ಹಾಗೂ ನವೀಕರಣ (ಖeಟಿeತಿಚಿಟ) ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ತಾ. 31 ಆಗಿದೆ.

ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ: ತಾಂತ್ರಿಕ ಹಾಗೂ ವಿವಿಧ ವೃತ್ತಿಪರ ಕೋಸುಗಳ ಖಿಔP ಅಐಂSS ವಿದ್ಯಾರ್ಥಿಗಳಿಗೆ (ಈಡಿesh) ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ತಾ. 31 ಕೊನೆಯ ದಿನವಾಗಿರುತ್ತದೆ. ಸ್ಕಾಲರ್‍ಶಿಪ್ ವೆಬ್‍ಸೈಟ್: ತಿತಿತಿ.sಛಿhoಟಚಿಡಿshiಠಿs.gov.iಟಿ

ಅರ್ಜಿ ಸಲ್ಲಿಸುವ ವಿಧಾನ: ಮೊದಲಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಲ್ಲಿ ವಿದ್ಯಾರ್ಥಿಯು ಇನ್ಸಿಟ್ಯೂಶನ್ ವೇರಿಫಿಕೇಷನ್, ಕಮ್ಯೂನಿಟಿ ದಿಕ್ಲರೇಷನ್ ಹಾಗೂ ಇನ್‍ಕಂ ಡಿಕ್ಲರೇಷನ್ ಎಂಬ 3 ನಮೂನೆಗಳನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿಕೊಳ್ಳುವದು.

ನಂತರ ವೆಬ್‍ಸೈಟ್: ತಿತಿತಿ.sಛಿhoಟಚಿಡಿshiಠಿs.gov.iಟಿನ ಔಟಿಟiಟಿe ಅರ್ಜಿಯಲ್ಲಿಯೇ ವಿದ್ಯಾರ್ಥಿಯ ಮಾಹಿತಿಯನ್ನು ಪೂರ್ಣ ಸಲ್ಲಿಸುವದು. ಯಾವದೇ ದಾಖಲಾತಿಗಳನ್ನು ಔಟಿಟiಟಿe ನಲ್ಲಿ ಅಪ್‍ಲೋಡ್ ಮಾಡುವಂತಿಲ್ಲ. ಕೇವಲ ಒಅಒ (ಖಿPಅಐಂSS) Sಛಿhoಟಚಿಡಿshiಠಿ (ಇಂಜಿನಿಯರಿಂಗ್, ಎಂಬಿಎ, ಎಂಡಿಎಸ್) ಕೋರ್ಸುಗಳ ವಿದ್ಯಾರ್ಥಿಗಳು ಮಾತ್ರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಬೇಕಾಗಿದೆ. ಅನ್‍ಲೈನ್ ಅರ್ಜಿ ಪ್ರತಿಯನ್ನು ತೆಗೆದಕೊಳ್ಳುವದು.

ಆನ್‍ಲೈನ್‍ನಿಂದ ಭರ್ತಿಯಾದ ಅರ್ಜಿ ಪಡೆದುಕೊಂಡ ಪ್ರತಿಯೊಂದಿಗೆ ಇನ್ಸಿಟ್ಯೂಶನ್ ವೇರಿಫಿಕೇಷನ್, ಕಮ್ಯೂನಿಟಿ ಡಿಕ್ಲರೇಷನ್ ಹಾಗೂ ಇನ್‍ಕಂ ಡಿಕ್ಲರೇಷನ್ ನಮೂನೆ ಹಾಗೂ ವಿದ್ಯಾರ್ಥಿಯ 2 ಫೋಟೋ, ಶುಲ್ಕ ಪಾವತಿ ರಸೀತಿ, ವಿದ್ಯಾರ್ಥಿ ಹೆಸರಿನಲ್ಲಿರುವ IಈSಅ ಅoಜe &amdiv; ಬ್ಯಾಂಕ್ ಖಾತೆ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ (ಸೆಮಿಸ್ಟರ್ ಅಥವಾ ವಾರ್ಷಿಕ), ಮತ್ತು ಹಿಂದಿನ ಕೋರ್ಸಿನ (ಉದಾ: ವಿದ್ಯಾರ್ಥಿಯು ಪದವಿ ವ್ಯಾಸಂಗ ಮಾಡುತ್ತಿದ್ದಲ್ಲಿ ಪಿಯುಸಿ ಅಂಕಪಟ್ಟಿ) ಹಾಗೂ ಆಧಾರ್ ಕಾರ್ಡ್‍ಗಳೊಂದಿಗೆ ದ್ವಿ ಪ್ರತಿಯಲ್ಲಿ ದಾಖಲಾತಿಗಳನ್ನು ಪಡೆದಿಟ್ಟುಕೊಳ್ಳುವದು.

ದಾಖಲಾತಿಗಳೊಂದಿಗೆ ಅರ್ಜಿಯ ಒಂದು ಪ್ರತಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಒಂದು ಪ್ರತಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಮಾಹಿತಿ ಕೇಂದ್ರ, ಬಿಸಿಎಂ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇಲ್ಲಿಗೆ ಸಲ್ಲಿಸಿ ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳುವದು. ಮೇಲಿನ ವಿದ್ಯಾರ್ಥಿ ವೇತನ ಸಂಬಂಧಿತ ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್‍ಸೈಟ್‍ನಲ್ಲಿ ಪಡೆಯಬಹುದು.

ಕಚೇರಿ ದೂರವಾಣಿ ಸಂಖ್ಯೆ: 08272-225628 ನ್ನು ಸಂಪರ್ಕಿಸಬಹುದು. ಈ ಮೇಲಿನ ಕಚೇರಿಯಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.