ಕರಿಕೆ, ಜು. 4: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿ.ಜೆ.ಪಿ. ಸರಕಾರ ‘ಒಂದೇ ದೇಶ - ಒಂದೇ ತೆರಿಗೆ’ ಪದ್ಧತಿ ಜಾರಿಯೊಂದಿಗೆ ಜನಸಾಮಾನ್ಯರಿಗೆ ಅನೇಕ ಸವಲತ್ತುಗಳನ್ನು ಕಲ್ಪಿಸಿದ್ದು, ದೇಶದ ಎಲ್ಲರೂ ಈ ಸೌಲಭ್ಯಗಳನ್ನು ಹೊಂದಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ.ವಿ.ಎಸ್.ಎಸ್.ಎನ್. ಸಭಾಂಗಣ ದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಎಲ್ಲರಿಗೂ ಸಮಾಜ ಬದುಕಿನೊಂದಿಗೆ ಅಗತ್ಯ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಜಿ.ಎಸ್.ಟಿ. ಜಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಚಂಗಪ್ಪ, ಪ್ರಮುಖರಾದ ತಳೂರು ಕಿಶೋರ್ ಕುಮಾರ್, ಮಹೇಶ್ ಜೈನಿ, ಕಾಳನ ರವಿ ಮೊದಲಾದವರು ಪಾಲ್ಗೊಂಡಿದ್ದರು. ಕರಿಕೆ ಬಿ.ಜೆ.ಪಿ. ಘಟಕದ ನೂತನ ಅಧ್ಯಕ್ಷರಾಗಿ ಹೊಸಮನೆ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಪಿ.ಎ. ವಿಜಯ ಸೇರಿದಂತೆ ನೂತನ ಸಮಿತಿ ರಚಿಸಲಾಯಿತು.

ಈ ಸಂದರ್ಭ ಕಳೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆ.ಎ. ನಾರಾಯಣ ಅವರನ್ನು ಶಾಸಕರು ಸನ್ಮಾನಿಸಿದರು.