ಸೋಮವಾರಪೇಟೆ, ಜು.5 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಗೋಣಿಮರೂರಿನಲ್ಲಿ ಪುನಶ್ಚೇತನಗೊಂಡಿರುವ ಬಪ್ಪನಕಟ್ಟೆ ಕೆರೆ ಲೋಕಾರ್ಪಣೆ ಹಾಗೂ ಸ್ವ-ಉದ್ಯೋಗ ವಿಚಾರ ಸಂಕಿರಣ ಕಾರ್ಯಕ್ರಮ ತಾ. 7ರಂದು ನಡೆಯಲಿದೆ.

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ನೇತೃತ್ವದಲ್ಲಿ ಗೋಣಿಮರೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೆರೆ ಪುನಶ್ಚೇತನಾ ಸಮಿತಿ, ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ಗಣಗೂರು ಗ್ರಾಮ ಪಂಚಾಯಿತಿ ಇವರುಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಕೆರೆ ಲೋಕಾರ್ಪಣೆ ಕಾರ್ಯ ನಡೆಯಲಿದೆ.

ನಂತರ 11 ಗಂಟೆಗೆ ಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಲಿರುವ ಸ್ವ-ಉದ್ಯೋಗ ವಿಚಾರ ಸಂಕಿರಣವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್. ಶ್ರೀನಿವಾಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಗಣಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಸುಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ ಈರಪ್ಪ, ಗೋಣಿಮರೂರು ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಜಿ. ಪುಟ್ಟಪ್ಪ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕೂಡಿಗೆ ಡಯಟ್‍ನ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಬೊಮ್ಮೇಗೌಡರು ಪಾಲ್ಗೊಳ್ಳಲಿದ್ದಾರೆ ಎಂದು ಯೋಜನೆಯ ಕೃಷಿ ಅಧಿಕಾರಿ ಗೀತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.