ಸೋಮವಾರಪೇಟೆ, ಜು. 5: ಭಾರತೀಯ ಜನತಾ ಪಾರ್ಟಿಯ ವಿನೂತನ ಕಾರ್ಯಕ್ರಮವಾದ ವಿಸ್ತಾರಕ್ ಯೋಜನೆಗೆ ಜಿಲ್ಲೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಚಾಲನೆ ನೀಡಿದರು.ಇಲ್ಲಿನ ವಲ್ಲಭಭಾಯಿ ಬಡಾವಣೆಯಲ್ಲಿರುವ ಮನೆಗಳಿಗೆ ತೆರಳಿದ ಸಿ.ಟಿ. ರವಿ ಸೇರಿದಂತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ರಾಜ್ಯ ಸರ್ಕಾರ ಜನವಿರೋಧಿ ಆಡಳಿತ ನಡೆಸುತ್ತಿದ್ದು, ಅಭಿವೃದ್ಧಿ ನಿಂತ ನೀರಾಗಿದೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗಾಗಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಪಕ್ಷದ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಗಣೇಶ್, ಮುಖಂಡರಾದ ಹಾಲಪ್ಪ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.