ವೀರಾಜಪೇಟೆ, ಜು. 6: ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡರೆ ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದು ಇಲ್ಲಿನ ರೋಟರಿ ಕ್ಲಬ್ನ ಅಧ್ಯಕ್ಷ ಮಂಡೇಪಂಡ ರಾಬಿನ್ ಮಂದಪ್ಪ ಹೇಳಿದರು.
ವೀರಾಜಪೇಟೆಯ ತೆಲುಗರ ಬೀದಿಯಲ್ಲಿರುವ ಕೂರ್ಗ್ ವ್ಯಾಲಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಬಿನ್ ಮಂದಪ್ಪ, ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆ ಇತರ ಸಾಂಸ್ಕøತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚಿತ್ರಬಾನು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ದಕ್ಷತೆ
ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಶಿಕ್ಷಣಕ್ಕೂ ವಿಶೇಷ ಗಮನ ಕೊಡಬೇಕು ಎಂದು ಹೇಳಿದರು.
ಶಾಲಾ ಮುಖಂಡರುಗಳಾಗಿ ರಮೇಶ್ ಹಾಗೂ ಜೋಷ್ನಾ, ಶಾಲಾ ನಾಯಕರಾಗಿ ಕಿರಣ್, ಕ್ರೀಡಾ ನಾಯಕನಾಗಿ ಅಜಿತ್, ಉಪ ನಾಯಕರುಗಳಾಗಿ ಐಶ್ವರ್ಯ, ಉನೈಝ್ ಅಧಿಕಾರ ವಹಿಸಿಕೊಂಡರು. ವೇದಿಕೆಯಲ್ಲಿ ವಿನಿತಾ ಮಂದಪ್ಪ ಉಪಸ್ಥಿತರಿದ್ದರು.
ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಚಿತ್ರಬಾನು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದ ಹಾಜರಿದ್ದರು.