ಮಡಿಕೇರಿ, ಜು. 5: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2017-18 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ 10 ನೇ ತರಗತಿಯವರೆಗಿನ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿರುತ್ತದೆ.

ಸ್ಕಾಲರ್‍ಶಿಪ್ ವೆಬ್‍ಸೈಟ್: ತಿತಿತಿ.sಛಿhoಟಚಿಡಿshiಠಿs.gov.iಟಿ. ಮೊದಲಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಲ್ಲಿ ವಿದ್ಯಾರ್ಥಿಯು ಇನ್ಸಿಟ್ಯೂಶನ್ ವೇರಿಫಿಕೇಷನ್, ಕಮ್ಯೂನಿಟಿ ಡಿಕ್ಲರೇಷನ್ ಹಾಗೂ ಇನ್‍ಕಂ ಡಿಕ್ಲರೇಷನ್ ಎಂಬ 3 ನಮೂನೆಗಳನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿಕೊಳ್ಳುವದು.

ನಂತರ ವೆಬ್‍ಸೈಟ್: ತಿತಿತಿ.sಛಿhoಟಚಿಡಿshiಠಿs.gov.iಟಿ ನ ಆನ್‍ಲೈನ್ ಅರ್ಜಿಯಲ್ಲಿಯೇ ವಿದ್ಯಾರ್ಥಿಯ ಮಾಹಿತಿಯನ್ನು ಪೂರ್ಣ ಸಲ್ಲಿಸುವದು. ಯಾವದೇ ದಾಖಲಾತಿಗಳನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವಂತಿಲ್ಲ. ಆನ್‍ಲೈನ್ ಅರ್ಜಿ ಪ್ರತಿಯನ್ನು ತೆಗೆದಕೊಳ್ಳುವದು. ಆನ್‍ಲೈನ್‍ನಿಂದ ಭರ್ತಿಯಾದ ಅರ್ಜಿ ಪಡೆದುಕೊಂಡ ಪ್ರತಿಯೊಂದಿಗೆ ಇನ್ಸಿಟ್ಯೂಶನ್ ವೆರಿಫಿಕೇಷನ್, ಕಮ್ಯೂನಿಟಿ ಡಿಕ್ಲರೇಷನ್ ಹಾಗೂ ಇನ್‍ಕಂ ಡಿಕ್ಲರೇಷನ್ ನಮೂನೆ ಹಾಗೂ ವಿದ್ಯಾರ್ಥಿಯ 2 ಫೋಟೋ, ಶುಲ್ಕ ಪಾವತಿ ರಸೀತಿ, ವಿದ್ಯಾರ್ಥಿ ಹೆಸರಿನಲ್ಲಿರುವ ಐಎಫ್‍ಎಸ್‍ಸಿ ಕೋಡ್, ಬ್ಯಾಂಕ್ ಖಾತೆ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ (ಸೆಮಿಸ್ಟರ್ ಅಥವ ವಾರ್ಷಿಕ) ಮತ್ತು ಹಿಂದಿನ ಕೋರ್ಸಿನ (ವಿದ್ಯಾರ್ಥಿಯು ಪದವಿ ವ್ಯಾಸಂಗ ಮಾಡುತ್ತಿದ್ದಲ್ಲಿ ಪಿಯುಸಿ ಅಂಕಪಟ್ಟಿ) ಹಾಗೂ ಆಧಾರ್ ಕಾರ್ಡ್‍ಗಳೊಂದಿಗೆ ದ್ವಿ ಪ್ರತಿಯಲ್ಲಿ ದಾಖಲಾತಿಗಳನ್ನು ಪಡೆದಿಟ್ಟುಕೊಳ್ಳುವದು. ದಾಖಲಾತಿಗಳೊಂದಿಗೆ ಅರ್ಜಿಯ ಒಂದು ಪ್ರತಿಯನ್ನು ಆಯಾಯ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳುವದು. ಸ್ವೀಕೃತಗೊಂಡ ಅರ್ಜಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಆನ್‍ಲೈನ್‍ನೊಂದಿಗೆ ಪರಿಶೀಲಿಸಿ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸುವದು. ವಿದ್ಯಾರ್ಥಿ ವೇತನ ಸಂಬಂಧಿತ ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್‍ಸೈಟ್‍ನಲ್ಲಿ ಪಡೆಯಬಹುದು. ಕಚೇರಿ ದೂರವಾಣಿ ಸಂಖ್ಯೆ: 08272-225628 ನ್ನು ಸಂಪರ್ಕಿಸಬಹುದು. ಈ ಕಚೇರಿಯಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಯಕ್ಷಗಾನ ಕಲಾಶಿಬಿರಕ್ಕೆ

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ(ಜಾತಿ) ಕಲಾವಿದರಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ 2017-18ನೇ ಸಾಲಿನಲ್ಲಿ ಯಕ್ಷಗಾನ ಮತ್ತು ಬಯಲಾಟ ಕಲಾಶಿಬಿರಗಳನ್ನು ನಡೆಸಲು ಉದ್ದೇಶಿಸಿದೆ. ಯಕ್ಷಗಾನ ಮತ್ತು ಬಯಲಾಟ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಶ್ರೀಕೃಷ್ಣಪಾರಿಜಾತ, ದೊಡ್ಡಾಟ, ಸಣ್ಣಾಟ, ಘಟ್ಟದಕೋರೆ, ತೊಗಲುಗೊಂಬೆಯಾಟ, ಸೂತ್ರದಗೊಂಬೆಯಾಟ, ಸಲಾಕೆಗೊಂಬೆಯಾಟ) ತರಬೇತಿ ನೀಡಬಯಸುವ ಹಿರಿಯ ಕಲಾವಿದರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಪ್ರತಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಕಾಡೆಮಿ ಕಚೇರಿಗೆ ಕಳುಹಿಸಬಹುದು. ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು ಅರ್ಜಿಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆಸಿರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕಾಗಿ ಕೋರಿದೆ. ಅರ್ಜಿ ಸಲ್ಲಿಸಲು ತಾ. 21 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿ ದೂ.ಸಂ:-080-22113146 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಉತ್ತೇಜನ ಸೌಲಭ್ಯಕ್ಕೆ

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2017-18ನೇ ಸಾಲಿನಲ್ಲಿ ಉನ್ನತ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ರೂ. 2 ಲಕ್ಷಗಳ ಉತ್ತೇಜನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‍ಲೈನ್ ಮೂಲಕ ವೆಬ್‍ಸೈಟ್: ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿಕೊಂಡು ಆಪ್‍ಲೈನ್ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ನಿರ್ದೇಶನಾಲಯಕ್ಕೆ ಸಲ್ಲಿಸುವದು.

ನಿರ್ದೇಶನಾಲಯದ ವಿಳಾಸ: ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 20ನೇ ಮಹಡಿ, ವಿ.ವಿ. ಗೋಪುರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-01. ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್‍ಸೈಟ್‍ನಲ್ಲಿ ಪಡೆಯಬಹುದು ಹಾಗೂ ಕಚೇರಿ ದೂ.ಸಂ: 08272-225628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.

ಪ್ರೋತ್ಸಾಹ ಧನಕ್ಕೆ

ಪ್ರಸಕ್ತ(2017-18ನೇ) ಸಾಲಿಗೆ ಐಐಎಂ, ಐಐಟಿ, ಐಐಎಸ್‍ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. 29 ಕೊನೆಯ ದಿನವಾಗಿದೆ ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ: 080-65970004 ನ್ನು ಕಚೇರಿ ವೇಳೆಯಲ್ಲಿ ಸಂರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ವಿದೇಶಿ ವ್ಯಾಸಂಗ ವೇತನಕ್ಕೆ

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ/ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು ಹಾಗೂ ದೂ.ಸಂ:080-65970004 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.