ಮಡಿಕೇರಿ, ಜು. 5: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ 2017-18ನೇ ಸಾಲಿನ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಕ್ರಿಶ್ಚಿಯನ್ ಜನಾಂಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಯೋಜನೆ, ಅರಿವು ವಿದ್ಯಾಭ್ಯಾಸ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶ್ರಮಶಕ್ತಿ ಸಾಲ ಹಾಗೂ ಸಹಾಯಧನ ಯೋಜನೆ, ಮೈಕ್ರೋಲೋನ್ ಯೋಜನೆ, ಪಶು ಸಂಗೋಪನಾ ಯೋಜನೆ, ಪ್ರವಾಸಿ ಟ್ಯಾಕ್ಸಿ ಯೋಜನೆ ಹೀಗೆ ವಿವಿಧ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ ಮೇಲ್ಪಟ್ಟು 55 ವರ್ಷದೊಳಗಿರಬೇಕು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವದಿಲ್ಲ. ಅರ್ಜಿ ಸಲ್ಲಿಸಲು ಆಧಾರ್ ಪ್ರತಿಯು ಕಡ್ಡಾಯವಾಗಿರುತ್ತದೆ. ಈಗಾಗಲೇ ಸಾಲ ಮನ್ನಾ ಆಗಿರುವ ಫಲಾನುಭವಿಗಳಿಗೆ ಹೊಸದಾಗಿ ಸಾಲ ನೀಡಲಾಗುವದಿಲ್ಲ. ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ. 81 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. 1,03,000 ಗಳ ಒಳಗಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾರ್ಡ್ ನಂ.07, ರಾಮಮಂದಿರ ದೇವಸ್ಥಾನದ ಹಿಂಭಾಗ, ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ಪಡೆಯಬಹುದು. ಅರ್ಜಿ ಪಡೆದುಕೊಳ್ಳಲು ಜುಲೈ, 20 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿರುತ್ತದೆ. ಕಚೇರಿ ದೂ.ಸಂ :08272-220449 ಹಾಗೂ ನಿಗಮದ ವೆಬ್‍ಸೈಟ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ ನಲ್ಲಿಯು ಅರ್ಜಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ಎನ್. ನಾಗೇಂದ್ರ ತಿಳಿಸಿದ್ದಾರೆ.