ಕುಶಾಲನಗರ, ಜು. 8: ಕೊಡಗು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಹಾಗೂ ಐಟಿ ಡೀಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಕುಶಾಲನಗರದಲ್ಲಿ ಜಿಎಸ್‍ಟಿ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್‍ನ ಉಪಾಧ್ಯಕ್ಷರಾದ ಬಿ.ಆರ್. ನಾಗೇಂದ್ರಪ್ರಸಾದ್ ಮಾತನಾಡಿ, ಜಿಎಸ್‍ಟಿ ಬಗ್ಗೆ ಇರುವ ಸಂಶಯಗಳನ್ನು ನಿವಾರಿಸಿಕೊಳ್ಳಲು ವೇದಿಕೆ ಕಲ್ಪಿಸಲಾಗಿದ್ದು ವರ್ತಕರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಸ್ಥಳೀಯ ಕನ್ನಿಕಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಚಾರ್ಟರ್ಡ್ ಅಕೌಂಟೆಂಟ್‍ಗಳಾದ ಪಿ.ಡಬ್ಲ್ಯು ಫ್ರಾನ್ಸಿಸ್, ಎ.ಎಸ್.ಅನ್ಶುಮಾನ್, ಕಾರ್ಯಕ್ರಮ ಪ್ರಾಯೋಜಕರಾದ ಟ್ಯಾಲಿ ಸಂಸ್ಥೆಯ ಸಂತೋಷ್, ಶಕ್ತಿ ಪ್ರಸಾದ್ ನೆರೆದಿದ್ದ ವರ್ತಕರಿಗೆ ಹಾಗೂ ಉದ್ಯಮಿಗಳಿಗೆ ಜಿಎಸ್‍ಟಿ ಕುರಿತಾಗಿ ಅಗತ್ಯ ಮಾಹಿತಿ ಒದಗಿಸಿದರು.

ಜಿಲ್ಲಾ ಐಟಿ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಪಿ. ಚಂದ್ರಶೇಖರ್, ಕುಶಾಲನಗರ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಅಮೃತ್‍ರಾಜ್, ಜಂಟಿ ಕಾರ್ಯದರ್ಶಿ ಕೆ.ಎಸ್. ನಾಗೇಶ್ ಇದ್ದರು.