ನಾಪೆÇೀಕ್ಲು, ಜು. 8: ಹೊದವಾಡದಂತಹ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ದಿಂದ ಇಂಟರ್‍ನ್ಯಾಷನಲ್ ಪದವಿ ಪೂರ್ವ ಕಾಲೇಜು ಆರಂಭಿಸಿರುವದು ಶ್ಲಾಘನೀಯ ಎಂದು ಶಿಕ್ಷಣ ಇಲಾಖೆಯ ಉಪನಿದೆರ್Éೀಶಕ ಟಿ. ಸ್ವಾಮಿ ಹೇಳಿದರು.

ಸಮೀಪದ ಹೊದವಾಡದಲ್ಲಿ ನೂತನವಾಗಿ ಆರಂಭಿಸಲಾದ ರಫೇಲ್ಸ್ ಇಂಟರ್‍ನ್ಯಾಷನಲ್ ಪದವಿ ಪೂರ್ವ ಕಾಲೇಜನ್ನು ಗಿಡಕ್ಕೆ ನೀರು ಹಾಕುವದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆಯ ಷರತ್ತು, ನಿಯಮಗಳಂತೆ ಅತಿ ಶೀಘ್ರದಲ್ಲಿ ಕಾಲೇಜು ಆರಂಭಿಸಲಾಗಿದೆ. ಸ್ವರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಬಾರದು ಎಂಬ ದೂರ ದೃಷ್ಟಿಯಿಂದ ಆರಂಭಿಸಲಾದ ಈ ವಿದ್ಯಾ ಸಂಸ್ಥೆಗೆ ಎಲ್ಲರ ಸಹಕಾರ ಅಗತ್ಯ ಇದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಲಿ ಎಂದು ಹಾರೈಸಿದರು.

ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆಂಚಪ್ಪ ಮಾತನಾಡಿ ಸ್ಪರ್ಧಾತ್ಮಕ ಶಿಕ್ಷಣಕ್ಕೆ ಖಾಸಗಿ ಕಾಲೇಜುಗಳು ಹೆಚ್ಚಿನ ಒತ್ತು ನೀಡುತ್ತಿವೆ. ಪಿ.ಯು.ಸಿ ಫಲಿತಾಶದಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿದೆ. ಇದನ್ನು ಎರಡನೇ ಸ್ಥಾನಕ್ಕೆ ಏರಿಸಲು ಪ್ರಯತ್ನ ನಡೆಯುತ್ತಿದೆ. ಅದಕ್ಕೆ ವಿದ್ಯಾರ್ಥಿಗಳ ಮತ್ತು ಪೆÇೀಷಕರ ಸಹಕಾರದ ಅಗತ್ಯವಿದೆ. ಈ ವಿದ್ಯಾಸಂಸ್ಥೆಯೂ ಹೆಚ್ಚಿನ ಫಲಿತಾಂಶ ಪಡೆಯುವದರೊಂದಿಗೆ ಉನ್ನತಿಗೇರಲಿ ಎಂದರು.

ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ.ಮನ್ಸೂರ್ ಅಲಿ ಮಾತನಾಡಿ ಮಹಿಳೆ ಪುರುಷರಿಗಿಂತ ಯಾವದರಲ್ಲಿಯೂ ಕಡಿಮೆ ಇಲ್ಲ ಎಂಬುದಕ್ಕೆ ಈ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಸಂಸ್ಥೆಯ ಅಧ್ಯಕ್ಷ ಅಬ್ದುಲ್ಲಾ ಅವರ ಪತ್ನಿ ಹಸಿನಾ ಅವರೇ ಸಾಕ್ಷಿ. ಅವರ ಸಾರಥ್ಯದಲ್ಲಿ ಈ ವಿದ್ಯಾ ಸಂಸ್ಥೆ ಉನ್ನತಿಗೇರಲಿ ಎಂದರು.

ಕಾರ್ಯಕ್ರಮದಲ್ಲಿ ಮೇಹಬೂಬ್ ಸಾಬ್ ಪ್ರಾಸ್ತಾವಿಕವಾಗಿ ಮಾತನಾಡಿ ದರೆ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಪಿಲಿಪ್‍ವಾಸ್, ಮರ್ಕಝ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಬ್ದುಲ್ಲಾ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಫೇಲ್ಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಬ್ದುಲ್ಲಾ ಹೆಚ್.ಹೆಚ್ ಮಾತನಾಡಿದರು.

ವೇದಿಕೆಯಲ್ಲಿ ಕೊಟ್ಟಮುಡಿ ಜಮಾಅತ್ ಅಧ್ಯಕ್ಷ ಹ್ಯಾರೀಸ್, ರೋಶನ್ ಮತ್ತಿತರರಿದ್ದರು.

ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಅಶ್ರಕ್ ಅಬೀಬ್ ಸ್ವಾಗತ. ಮೇಹಬೂಬು ಸಾಬ್ ನಿರೂಪಿಸಿ, ವಂದಿಸಿದರು.