ಮಡಿಕೇರಿ, ಜು. 8 : ಪ್ರಸಕ್ತ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಲು ತಾ. 31 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‍ಗಳಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 3 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೋಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಅರ್ಜಿ ನಮೂನೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಡೀಕರಣ ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಈ ದಾಖಲಾತಿಗಳನ್ನು ಸಲ್ಲಿಸಬೇಕು.

ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.