ಕರಿಕೆ, ಜು. 8 : ಇಲ್ಲಿಗೆ ಸಮೀಪದ ಚೆತ್ತುಕಾಯ ಎಂಬಲ್ಲಿ ಹೊಳೆÀಗೆ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ ಬಿದಿರಿನ ತೂಗು ಪಾಲವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಗ್ರಾಮಸ್ಥರು ಕಳೆದ ಹಲವಾರು ವರ್ಷಗಳಿಂದ ಪ್ರತಿ ಮಳೆಗಾಲ ಆರಂಭವಾಗುವಾಗ 40 ರಿಂದ 50 ಸಾವಿರ ರೂಪಾಯಿ ಖರ್ಚು ಮಾಡಿ ತೂಗುಪಾಲ ನಿರ್ಮಿಸುತ್ತಿದ್ದು, ಇದರಿಂದ ಗ್ರಾಮಸ್ಥರ ತೆರಿಗೆ ಹಣ ಪೋಲಾಗುತ್ತದಲ್ಲದೆ, ಪಂಚಾಯಿತಿಗೂ ಹೊರೆಯಾಗುವದರಿಂದ ಸರಕಾರ ಈ ಬಗ್ಗೆ ಗಮನ ಹರಿಸಿ ಕೂಡಲೇ ಗ್ರಾಮದ ಸಮಸ್ಯೆಗೆ ಸ್ಪಂದಿಸಬೇಕೆಂದು ಆಗ್ರಹಿಸಿದರು. ನಂತರ ಮಾತನಾಡಿದ ಅಧ್ಯಕ್ಷರು ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವದರೊಂದಿಗೆ ಉಸ್ತುವಾರಿ ಸಚಿವರ ಗಮನ ಸೆಳೆಯುವ ಪ್ರಯತ್ನ ಮಾಡುವದಾಗಿ ಭರವಸೆ ನೀಡಿದರು.