ಕೂಡಿಗೆ, ಜು. 8: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಹಯೋಗದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶವು ತಾ. 12ರಂದು ಬೆಂಗಳೂರಿನ ಕೆಂಪೇಗೌಡ ರಸ್ತೆಯ ಶೈಕ್ಷಣಿಕ ಸದನದಲ್ಲಿ ನಡೆಯಲಿದೆ.

ಸಮಾವೇಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಠ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಶೇಖರ್‍ಗೌಡ ಮಾಲಿ ಪಾಟೀಲ್, ಹಿರಿಯ ಚಿಂತಕರು ಮತ್ತು ಶಿಕ್ಷಣ ತಜ್ಞ ಡಾ. ಜಿ. ರಾಮಕೃಷ್ಣ, ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಕೊಡಗು ಜಿಲ್ಲೆಯ ಕಾಲೇಜಿನ ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಳ್ಳುವ ಎಲ್ಲಾ ಉಪನ್ಯಾಸಕರುಗಳಿಗೆ ಓಓಡಿ ಸೌಲಭ್ಯ ಕಲ್ಪಿಸಲಾಗಿದೆ ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್ ತಿಳಿಸಿದ್ದಾರೆ.