ಮಡಿಕೇರಿ, ಜು. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಗ್ರೀನ್‍ಡಾಟ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ತಾ. 11 ರಂದು ಬೆಳಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಇತರರು ಪಾಲ್ಗೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಚಾಲನೆ ನೀಡಲಿದ್ದಾರೆ.