ಒಡೆಯನಪುರ, ಜು. 9: ‘ಉತ್ತಮ ಆರೋಗ್ಯದಿಂದ ಸುಂದರ ಜೀವನ ನಡೆಸಬಹುದು’ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯ ಪಟ್ಟರು. ಭಾನುವಾರ ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ಪ್ರಬುದ್ದ ನೌಕರರ ಒಕ್ಕೂಟ, ಕೊಡ್ಲಿಪೇಟೆ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು, ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆ, ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಡಾ. ಅರಿವಝನ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ, ಆರೋಗ್ಯ ತಪಾಸಣಾ ಶಿಬಿರವು ಸಮಾಜ ಸೇವೆಯ ಒಂದು ಭಾಗವಾಗಿದೆ, ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು ಗ್ರಾಮೀಣ ಭಾಗದ ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿರುವದು ಶ್ಲಾಘನೀಯ ಎಂದರು.
ಮಾಜಿ ಎಂಎಲ್ಸಿ ಎಸ್.ಜಿ. ಮೇದಪ್ಪ ಮಾತನಾಡಿ, ಪ್ರತಿಯೊಬ್ಬರೂ ಉತ್ತಮವಾದ ಆರೋಗ್ಯವನ್ನು ಹೊಂದಲು ಪ್ರಯತ್ನಿಸಬೇಕು ಎಂದರು.
ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆಯ ಹೃದಯ ತಜ್ಞ ಡಾ. ಅರಿವಝನ್ ಮಾತನಾಡಿ, ವ್ಯಾಯಾಮ ಹಾಗೂ ಸಕರಾತ್ಮಕ ಆಲೋಚನೆ ಹಾಗೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವದ್ದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಜಿ.ಪಂ.ಸದಸ್ಯ ವಿ.ಪಿ. ಶಶಿಧರ್, ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿದರು. ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟಿ.ಇ. ಸುರೇಶ್ ಅಧ್ಯಕ್ಷತೆವಹಿಸಿದ್ದರು. ಸಮಾರಂಭದಲ್ಲಿ ಜಿ.ಪಂ.ಸದಸ್ಯ ಸಿ.ಪಿ. ಪುಟ್ಟರಾಜು, ಮಡಿಕೇರಿ ಜಲ್ಲಾ ಆಸ್ಪತ್ರೆಯ ಉಪ ವೈದ್ಯಾಧಿಕಾರಿ ಡಾ.ದೇವದಾಸ್, ಗ್ರಾ.ಪಂ. ಅಧ್ಯಕ್ಷೆ ಅನುಸೂಯ, ಪ್ರಬುದ್ದ ನೌಕರರ ಒಕ್ಕೂಟದ ಅಧ್ಯಕ್ಷ ಡಾ. ಸತೀಶ್, ಕೊಡ್ಲಿಪೇಟೆ ಗೌರಮ್ಮ ಶಾಂತಮಲ್ಲಪ್ಪ ವಿದ್ಯಾಸಂಸ್ಥೆಯ ನಿರ್ದೇಶಕರುಗಳಾದ ಡಾ. ಉದಯ್ಕುಮಾರ್, ಶಂಭುಲಿಂಗಪ್ಪ, ಎಸ್.ಎಸ್. ನಾಗರಾಜ್, ಶನಿವಾರಸಂತೆ ಠಾಣಾಧಿಕಾರಿ ಮರಿಸ್ವಾಮಿ, ಶನಿವಾರಸಂತೆ ಪತ್ರಕರ್ತ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್, ಪ್ರಮುಖರಾದ ದಿವಾಕರ್, ಎಸ್.ಸಿ. ಸತೀಶ್, ಡಿ.ಸಿ. ನಿರ್ವಾಣಪ್ಪ, ಜೆ.ಕೆ. ತೇಜಕುಮಾರ್, ಔರಂಗಜೇಬ್, ಬಿ.ಇ. ಜಯೇಂದ್ರ ಮುಂತಾದವರು ಇದ್ದರು.