ಕುಶಾಲನಗರ, ಜು. 12: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವೇಳಾಪಟ್ಟಿ ಬದಲಾವಣೆಗೊಳಿಸಿರುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ತರಗತಿಗಳನ್ನು ಮುಂಜಾನೆ 8 ಗಂಟೆಗೆ ಪ್ರಾರಂಭಿಸುವಂತೆ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿರುವದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗಿದೆ. ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ರಸ್ತೆ ಅವ್ಯವಸ್ಥೆ ಹಾಗೂ ಸಾರಿಗೆ ಬಸ್‍ಗಳ ಕೊರತೆಯ ಕಾರಣ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಲುಪಲು ಅಸಾಧ್ಯ ವಾಗಿದ್ದು, ಉನ್ನತ ಶಿಕ್ಷಣ ಇಲಾಖೆ ಈ ಕೂಡಲೇ ಈ ಆದೇಶವನ್ನು

ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ರಾಜ್ಯ ಸರಕಾರದಿಂದ ಒದಗಿಸುವ ಉಚಿತ ಬಸ್ ಪಾಸ್ ಅನ್ನು ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೂ ಒದಗಿಸ ಬೇಕೆಂದು ವಿದ್ಯಾರ್ಥಿಗಳು ಸರಕಾರವನ್ನು ಒತ್ತಾಯಿಸಿದರು.

ಈ ಸಂದರ್ಭ ಎಬಿವಿಪಿ ಪ್ರಮುಖರಾದ ನವನೀತ್, ಹರೀಶ್, ಶರತ್, ನಿಖಿಲ್, ಯೋಶಿತಾ, ಸೌಮ್ಯ ಮತ್ತಿತರರು ಇದ್ದರು.