ಮಡಿಕೇರಿ, ಜು. 12: ಕೊಡಗು ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕಗ್ಗೋಡ್ಲುವಿನ ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟವನ್ನು ಆಗಸ್ಟ್ 12 ರಂದು ನಡೆಸಲು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ನವೀನ್ ದೇರಳ ತಿಳಿಸಿದ್ದಾರೆ.

ಈ ಬಾರಿ ವಿಶೇಷವಾಗಿ ಮಹಿಳೆಯರಿಗೆ ಮುಕ್ತ ಥ್ರೋಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ಪ್ರತಿವರ್ಷದಂತೆ ಪುರುಷರ ವಾಲಿಬಾಲ್, ಪುರುಷರ ಮತ್ತು ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆಗಳು ಈ ಬಾರಿ ಕೂಡ ನಡೆಯಲಿವೆ.

ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವದು. ಭಾಗವಹಿಸುವ ತಂಡಗಳು ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 10 ಕೊನೆಯ ದಿನವಾಗಿರುತ್ತದೆ. ನಂತರ ಬರುವ ತಂಡಗಳನ್ನು ಕಡ್ಡಾಯವಾಗಿ ಪರಿಗಣಿಸಲಾಗುವದಿಲ್ಲ ಎಂದು ನವೀನ್ ದೇರಳ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನವೀನ್ ದೇರಳ- 9740404520, ಕಾರ್ಯದರ್ಶಿ ಬಾಳಾಡಿ ದಿಲೀಪ್ ಕುಮಾರ್-9480674546, ಉಪಾಧ್ಯಕ್ಷರು ಟಿ.ಎ. ಕುಮಾರ್- 9845178711, ಜಿಲ್ಲಾಧ್ಯಕ್ಷ ಎಂ.ಬಿ. ಜೋಯಪ್ಪ- 9901316315, ಜಿಲ್ಲಾ ಕಾರ್ಯದರ್ಶಿ ಪಿ.ಪಿ. ಸುಕುಮಾರ್- 9481213920 ಅನ್ನು ಸಂಪರ್ಕಿಸಬಹುದಾಗಿದೆ.