ಬೆಂಗಳೂರು, ಜು. 13: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ 1117 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂaದು ಎಸ್.ಎಸ್.ಎಲ್.ಸಿ. ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದ ಬೋಪಣ್ಣ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 1895 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ ಮಡಿಕೇರಿ ತಾಲೂಕಿನಲ್ಲಿ 526 ವಿದ್ಯಾರ್ಥಿಗಳ ಪೈಕಿ 404 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 265 ಬಾಲಕರು ಮತ್ತು 139 ಬಾಲಕಿಯರು ತೇರ್ಗಡೆಯಾಗಿದ್ದಾರೆ.

ಸೋಮವಾರಪೇಟೆ ತಾಲೂಕಿನಲ್ಲಿ 825 ವಿದ್ಯಾರ್ಥಿಗಳ ಪೈಕಿ 323 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 185 ಬಾಲಕರು ಹಾಗೂ 138 ಬಾಲಕಿಯರು ಸೇರಿದ್ದಾರೆ.

ವೀರಾಜಪೇಟೆ ತಾಲೂಕಿನಲ್ಲಿ 544 ವಿದ್ಯಾರ್ಥಿಗಳ ಪೈಕಿ 390 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಈ ಪೈಕಿ 227 ಬಾಲಕರು ಹಾಗೂ 163 ವಿದ್ಯಾರ್ಥಿನಿಯರು ಸೇರಿದ್ದಾರೆ ಎಂದು ತಿಳಿಸಿದ್ದಾರೆ.

-ಬಿ.ಜಿ. ರವಿಕುಮಾರ್.