ಕುಶಾಲನಗರ, ಜು. 13: ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ, ಎಂ.ವಿ. ಪ್ರಸಾದ್ ಅವರುಗಳಿಗೆ ಅಫಿಡವಿಟ್ ಸಲ್ಲಿಸಲು ಸರ್ವೋಚ್ಚ ನ್ಯಾಯಾಲಯ ಅವಕಾಶ ಕಲ್ಪಿಸಿದೆ.ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಗಣಪತಿ ಅವರ ತಂದೆ ಕುಶಾಲಪ್ಪ ಹಾಗೂ ಸಹೋದರ ಮಾಚಯ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ತೀರ್ಪು ಪ್ರಕಟಿಸಲು ದಿನಾಂಕ ನಿಗದಿಯಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾದ ಆರೋಪಿಗಳ ಪರ ವಕೀಲರು ಹೇಳಿಕೆ ನೀಡಲು ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಫಿಡವಿಟ್ ಮೂಲಕ ಹೇಳಿಕೆ ಸಲ್ಲಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿದು ಬಂದಿದೆ.