ಮಡಿಕೇರಿ, ಜು. 13: ಪುಷ್ಪಗಿರಿ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ಕೊಡಗಿನ ಕೆಲವು ಗ್ರಾಮಗಳನ್ನು ಸೂಕ್ಷ್ಮ ಪರಿಸರ ತಾಣವೆಂದು ಘೋಷಿಸಿರುವದರ ವಿರುದ್ಧ ತಾ. 17ರಂದು ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪುಷ್ಪಗಿರಿ ಮೂಲ ನಿವಾಸಿಗಳ ಸಂಘ ತಿಳಿಸಿದೆ.