ಕೂಡಿಗೆ, ಜು. 13: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಹೈದರಾಲಿ ಅವರನ್ನು ಆರೋಗ್ಯ ಕೇಂದ್ರದ ವತಿಯಿಂದ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗಪ್ಪ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ರವಿಚಂದ್ರ, ಕೇಂದ್ರದ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.