ಮಡಿಕೇರಿ, ಜು. 14: ಕೊಡಗು ಕೇಂದ್ರಾಡಳಿತ ಪ್ರದೇಶ ರಚನೆ ಮತ್ತು ಕೊಡವ ಲ್ಯಾಂಡ್ ಸ್ವಾಯತ್ತತೆಗೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಲಾಯಿತು.ಸಿ.ಎಸ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆದು ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು, ಕರ್ನಾಟಕ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭ ಬಾಚರಣಿಯಂಡ ಚಿಪ್ಪಣ್ಣ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಬಾಚಮಂಡ ಕಸ್ತೂರಿ, ಅರೆಯಡ ಸವಿತ ಗಿರೀಶ್, ಅಜ್ಜಿಕುಟ್ಟಿರ ಲೋಕೇಶ್, ಬಲ್ಲಚಂಡ ಟಿಟ್ಟು, ಮಂದಪಂಡ ಮನೋಜ್, ಬೇಪಡಿಯಂಡ ದಿನು, ಬೇಪಡಿಯಂಡ ಬಿದ್ದಪ್ಪ, ಬಾಚಮಂಡ ಬೆಲ್ಲು ಪೂವಪ್ಪ, ಕಾಟುಮಣಿಯಂಡ ಉಮೇಶ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಕಿರಿಯಮಾಡ ಶರೀನ್, ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಮಣವಟ್ಟಿರ ನಂದ, ಮಣವಟ್ಟಿರ ಸ್ವರೂಪ್, ಮಣವಟ್ಟಿರ ಶಿವಣಿ, ಅಳಮಂಡ ನೆಹರು, ಪಟ್ಟಮಾಡ ಕುಶ, ಕುಲ್ಲೇಟಿರ ಬೇಬ, ಅಪ್ಪೆಂಗಡ ಮಾಲೆ, ಕೂಪದಿರ ಸಾಬು, ಅರೆಯಡ ಗಿರೀಶ್, ಅಪ್ಪಾರಂಡ ಪ್ರಸಾದ್, ಮೊಣ್ಣಂಡ ಕಾರ್ಯಪ್ಪ, ನಂದಿನೆರವಂಡ ವಿಜು, ತೀತಿಮಾಡ ಮಾದಪ್ಪ, ತೀತಿಮಾಡ ಪೂಣಚ್ಚ ಮತ್ತು ತೀತಿಮಾಡ ನಾಚಪ್ಪ ಪಾಲ್ಗೊಂಡಿದ್ದರು.