ಮಡಿಕೇರಿ, ಜು. 14: 2017-18ನೇ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವಿನ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದ ಯುವಕ-ಯುವತಿಯರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ ನೀಡಲು ಸರ್ಕಾರ ಮಂಜೂರಾತಿ ನೀಡಿದ್ದು, ಅದರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾಗಿದ್ದಲ್ಲಿ ಅಂತಹವರು ರೂ. 2 ಲಕ್ಷಗಳ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸಬಹುದು.

ಅಂತರ್ ಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬೇಕು.

ಈ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವತಿಯರ ವಯೋಮಾನ ಕನಿಷ್ಟ 18 ವರ್ಷದಿಂದ ಗರಿಷ್ಠ 42 ವರ್ಷ ಹಾಗೂ ಯುವಕನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಠ 45 ವರ್ಷ ಆಗಿರತಕ್ಕದ್ದು. ಆದಾಯ ಮಿತಿ 2 ಲಕ್ಷಗಳ ಮಿತಿಯೊಳಗಿರಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ-ಯುವತಿಯರು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಮುಂಚೆ ಉಪ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ವಿವಾಹದ ಬಗ್ಗೆ ನೋಂದಾಯಿಸಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಯುವಕ-ಯುವತಿಯರು ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದ ಯುವಕ ವಾಸ್ತವ್ಯ ಇರುವ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, 08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ತಿಳಿಸಿದ್ದಾರೆ.

ಪ್ರತಿಭಾ ಪುರಸ್ಕಾರಕ್ಕೆ

ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕಗಳಿಸಿದ ಜಿಲ್ಲೆಯ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್‍ನ ವತಿಯಿಂದ ತಾ. 25 ರಂದು ಮಡಿಕೇರಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

ಬ್ಯಾರಿ ಸಮುದಾಯದ ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿ, ಸ್ವವಿಳಾಸ, ಭಾವಚಿತ್ರ ಹಾಗೂ ಮೊಬೈಲ್ ಸಂಪರ್ಕ ಸಂಖ್ಯೆ ಸಹಿತ ಮಾಹಿತಿಗಳನ್ನು ಮಡಿಕೇರಿಯ ಹಿಲ್ ರಸ್ತೆಯಲ್ಲಿರುವ ಟ್ರಸ್ಟ್‍ನ ಕಚೇರಿಗೆ ತಾ. 22 ರೊಳಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ, 9886446444, 9480678890, 8123961246.

ಪ್ರೋತ್ಸಾಹ ಧನಕ್ಕೆ

2016-17ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ ತಿತಿತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದ್ವಿತೀಯ ಪಿ.ಯು.ಸಿ., 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ರೂ. 20 ಸಾವಿರ, ಡಿಗ್ರಿ ರೂ. 25,000, ಪೋಸ್ಟ್ ಗ್ರ್ಯಾಜುವೇಟ್ ಕೋರ್ಸ್ ಎಂ.ಎ., ಎಂ.ಎಸ್.ಸಿ., ಎಂ.ಕಾಂ, ಎಂ.ಬಿ.ಎ., ಎಂ.ಸಿ.ಎ, ಎಂ.ಐ.ಎಫ್.ಎ ರೂ. 30,000 ಹಾಗೂ ಕೃಷಿ, ಇಂಜಿನಿಯರಿಂಗ್, ಮೆಡಿಸಿನ್, ವೆಟನರಿ ರೂ. 35,000.

ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.