ಸೋಮವಾರಪೇಟೆ, ಜು. 14: ರಾಜ್ಯ ಸರಕಾರ ನೂತನವಾಗಿ ಜಾರಿಗೆ ತಂದಿರುವ ಪ್ರಥಮ ದರ್ಜೆ ಕಾಲೇಜುಗಳ ತರಗತಿ ಅವಧಿ ಬದಲಾವಣೆಯನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ನೇತೃತ್ವದಲ್ಲಿ ಇಲ್ಲಿನ ಯಡೂರು ಬಿಟಿ ಚೆನ್ನಯ್ಯ ಗೌರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕಾಲೇಜು ಆವರಣದಿಂದ ಪಟ್ಟಣದವರೆಗೆ ಮೆರವಣಿಗೆಯಲ್ಲಿ ತೆರಳಿದ ವಿದ್ಯಾರ್ಥಿಗಳು ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಘೋಷಣೆಗಳನ್ನು ಕೂಗಿದರು. ಕೊಡಗು ಜಿಲ್ಲೆಯಲ್ಲಿ ಹೆÀಚ್ಚಿನ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬರುವವರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ. ಕೆಲವು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಬೆಳಿಗ್ಗÉ 8 ಗಂಟೆವರೆಗೆ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರು ಈ ಆದೇಶವನ್ನು ತಕ್ಷಣ ಹಿಂಪಡೆದು ಹಳೆಯ ನಿಯಮವನ್ನೆ ಜಾರಿಗೆ ತರಬೇಕೆಂದು ಎಬಿವಿಪಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಬಿ.ಎಸ್. ದರ್ಶನ್, ನಗರ ಸಹ ಕಾರ್ಯದರ್ಶಿ ಜಿ.ಜಿ. ಲಿಖಿತ್, ವಿದ್ಯಾರ್ಥಿಗಳಾದ ಅಭಿಲಾಷ್, ರಕ್ಷಿತ್, ವಿಶ್ವಾಸ್, ಯಶ್ವಂತ್, ದೀಕ್ಷಿತ್, ಇಂದ್ರ ಕುಮಾರ್, ಕೀರ್ತಿ ಕುಮಾರ್, ಭರತ್, ಕೀರ್ತಿ, ಚಂದ್ರಕಲಾ, ಶ್ವೇತ, ಯಶಸ್ವಿನಿ ಮತ್ತಿತರರು ಪಾಲ್ಗೊಂಡಿದ್ದರು.