ಮಡಿಕೇರಿ, ಜು. 15: ಮಾರ್ಚ್ ಮತ್ತು ಏಪ್ರಿಲ್ 2017 ರಲ್ಲಿ ನಡೆದ ಎಸ್.ಎಸ್.ಎಲ್.ಸಿ/ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ “ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವದು. ಅರ್ಜಿಯನ್ನು ಆನ್ಲೈನ್ ಮೂಲಕ ಞಚಿಡಿeಠಿಚಿss.ಛಿgg.gov.iಟಿ ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿ, ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿರುವ ಎಲ್ಲಾ ದಾಖಲೆಗಳ ಒಂದು ಸೆಟ್ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮಡಿಕೇರಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ನೋಡಬಹುದು ಹಾಗೂ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮಡಿಕೇರಿ ರವರನ್ನು ಕಚೇರಿ ವೇಳೆಯಲ್ಲಿ ಹಾಗೂ ಕಚೇರಿ ದೂ.ಸಂ: 08272-225628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.