ಮಡಿಕೇರಿ, ಜು. 15: ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯು ತಾ. 20 ರಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲೆಗೆ ಆಗಮಿಸಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನಸಭಾ ಸದಸ್ಯ ಎನ್.ಎ. ಹ್ಯಾರಿಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಕೊಡಗು ಜಿಲ್ಲೆಯಲ್ಲಿನ ಮಹಿಳೆಯರು, ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರು, ಲಿಂಗತ್ವ ಅಲ್ಪಸಂಖ್ಯಾತರು, ದೇವದಾಸಿಯರು ಇವರುಗಳ ಕಲ್ಯಾಣ, ಅಭಿವೃದ್ಧಿ, ರಕ್ಷಣೆ ಮತ್ತು ಉದ್ಯೋಗದಲ್ಲಿ ಮೀಸಲಾತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ, ಅನುಷ್ಠಾನಗೊಳಿಸಿರುವ ಹಲವು ಯೋಜನೆ, ಕಾರ್ಯಕ್ರಮ, ಕಾಯಿದೆ, ನಿಯಮ, ಅನುದಾನ, ಆರೋಗ್ಯ ಶಿಬಿರ, ಜಾಗೃತಿ ಶಿಬಿರ ಹಾಗೂ ಇನ್ನಿತರ ಯೋಜನೆಗಳ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸ್ಥಳೀಯ ಅಧಿಕಾರಿಗಳ ಸಮಕ್ಷಮದಲ್ಲಿ ಪರಿಶೀಲನಾ ಸಭೆಯನ್ನು ನಡೆಸಲಿದೆ ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್ ತಿಳಿಸಿದ್ದಾರೆ.