ಮಡಿಕೇರಿ, ಜು. 17 : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲೂಕಿನ ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ರಷ್ಟು ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರುಗಳÀನ್ನು ತಾ.18 ರಂದು (ಇಂದು) ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಗುವದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.

ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಜಿಲ್ಲಾ ಆಸ್ಪತ್ರೆಯ ಮುಖ್ಯ ಉಪ ವೈದ್ಯಾಧಿಕಾರಿ ಡಾ. ಎಸ್.ದೇವದಾಸ ಅಧ್ಯಕ್ಷತೆ ವಹಿಸಲಿದ್ದಾರೆ.

ಉಪನ್ಯಾಸಕರು ಹಾಗೂ ಸಮಾಜ ಸೇವಕ ಟಿ.ವಿ. ಕಿಶೋರ್ ಮುಖ್ಯ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಸತೀಶ್, ವ್ಯಾಂಡಮ್ ಎಂಟರ್ ಪ್ರೈಸಸ್‍ನ ಮಾಲೀಕರಾದ ದಾಮೋದರ್ ಉಪಸ್ಥಿತರಿರುವರು. ದಾನಿ ಟಿ.ಆರ್. ವಾಸುದೇವ್, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಉಪನ್ಯಾಸಕರುಗಳನ್ನು ಸನ್ಮಾನಿಸಲಿದ್ದಾರೆ ಎಂದು ತಿಳಿಸಿದ್ದಾರೆ.