ಮಡಿಕೇರಿ, ಜು. 17: ಕಳೆದ ಒಂದು ವರ್ಷ ಏಳು ತಿಂಗಳು 17 ದಿನಗಳ ಕಾಲ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಉಪ ಕಾರ್ಯ ದರ್ಶಿಯಾಗಿ ವರ್ಗಾವಣೆಗೊಂಡಿರುವ ಚಾರುಲತಾ ಸೋಮಲ್ ಅವರನ್ನು ಜಿ.ಪಂ. ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾರುಲತಾ ಸೋಮಲ್ ಅವರಿಗೆ ಶಾಲು, ಫಲ ತಾಂಬೂಲ, ಒಡಿಕತ್ತಿ ನೀಡಿ ಸನ್ಮಾನಿಸಲಾಯಿತು.

ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಚಾರುಲತಾ ಸೋಮಲ್ ಅವರು ಜಿಲ್ಲಾ ಪಂಚಾಯತ್‍ನಲ್ಲಿ ಕಾರ್ಯನಿರ್ವಹಿಸಿರುವದು ಇದೇ ಮೊದಲು, ಇದಕ್ಕೂ ಮೊದಲು ಉಪ ವಿಭಾಗಾಧಿಕಾರಿಯಾಗಿ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದೆ, ಜಿಲ್ಲಾ ಪಂಚಾಯತ್‍ನ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಜಿ.ಪಂ.ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದಿಂದ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಜಿ.ಪಂ.ಉಪ ಕಾರ್ಯದರ್ಶಿ ಸಿದ್ದಲಿಂಗಮೂರ್ತಿ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜ, ವಾರ್ತಾಧಿಕಾರಿ ಚಿನ್ನಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಮಮ್ತಾಜ್, ತಾ.ಪಂ.ನ ಪ್ರೀತಂ, ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ, ವೀರಾಜಪೇಟೆ ತಾ.ಪಂ. ಇಓ ಪಡ್ನೇಕರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸಿ. ನಾಗರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್, ಜಿ.ಪಂ. ಇಂಜಿನಿಯರ್ ರಾಜ್‍ಕುಮಾರ್ ರೆಡ್ಡಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ, ಜಿಲ್ಲಾ ಆಯುಷ್ ಅಧಿಕಾರಿ ರಾಮಚಂದ್ರ, ಅಕ್ಷರ ದಾಸೋಹ ಅಧಿಕಾರಿ ರಾಜಶೇಖರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಮಹದೇವು, ಸಂಪೂರ್ಣ ಸ್ವಚ್ಛತಾ ಆಂದೋಲನದ ಸಮಾಲೋಚಕ ಸೂರಜ್, ಜಿ.ಪಂ.ನ ದಾಮೋದರ್, ವಸಂತ, ರಾಣಿ, ಐಟಿಡಿಪಿ ಇಲಾಖೆಯ ರಂಗನಾಥ್ ಇತರರು ಚಾರುಲತಾ ಸೋಮಲ್ ಅವರ ಆಡಳಿತದ ಬಗ್ಗೆ ಗುಣಗಾನ ಮಾಡಿದರು.