ಮಡಿಕೇರಿ, ಜು. 18 : 2016-17 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಗೌರವಿಸಲು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ನಿರ್ಧರಿಸಿದೆ. ಒಕ್ಕಲಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿದ್ದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ತಮ್ಮ ಪೂರ್ಣ ವಿಳಾಸ, ಭಾವಚಿತ್ರ ಮತ್ತು ಅಂಕಪಟ್ಟಿಯ ಪ್ರತಿಯೊಂದಿಗೆ
ತಾ. 31ರ ಒಳಗಾಗಿ ಅರ್ಜಿಯನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಒಕ್ಕಲಿಗರ ಸಂಘ, ಕಿರಗಂದೂರು ಗ್ರಾಮ ಮತ್ತು ಅಂಚೆ-571251 ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: 8762345577 ಮತ್ತು 9448976406 ಸಂಪರ್ಕಿಸಬಹುದಾಗಿದೆ.