ಸುಂಟಿಕೊಪ್ಪ, ಜು. 18: ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಂಟಿಕೊಪ್ಪ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾ.20ರಂದು ಬೆಳಿಗ್ಗೆ 11 ಗಂಟೆಗೆ ಸುಂಟಿಕೊಪ್ಪ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿರುವ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆ ಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ.
ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪತ್ರಿಕಾ ದಿನಾಚರಣೆಯ ಮಹತ್ವದ ಕುರಿತು ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪಾಸಿ ಅಧ್ಯಕ್ಷ ಡಿ. ವಿನೋದ್ ಶಿವಪ್ಪ, ಹಾಸನ ಗ್ರಾಹಕರ ವ್ಯಾಜ್ಯಗಳ ನ್ಯಾಯಾಲಯದ ಅಧ್ಯಕ್ಷ ಎ.ಲೋಕೇಶ್ ಕುಮಾರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ಜಿ.ಪಂ. ಸದಸ್ಯರುಗಳಾದ ಕೆ.ಪಿ.ಚಂದ್ರಕಲಾ, ಕುಮುದಾ ಧರ್ಮಪ್ಪ, ತಾ.ಪಂ.ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಆಗಮಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ. ವಿನ್ಸೆಂಟ್ ವಿನೋದ್ ವಹಿಸಲಿದ್ದಾರೆ.
ಕಳೆದ ಸಾಲಿನಲ್ಲಿ ಹತ್ತನೆ ತರಗತಿಯಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದ ವಿಘ್ನೇಶ್ ಭೂತನಕಾಡುಗೆ ಸನ್ಮಾನ. ತಾಲೂಕು ಪತ್ರಕರ್ತರ ಸಂಘದಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಐದು ಮಂದಿಗೆ ಪ್ರಶಸ್ತಿಯನ್ನು ವಿತರಿಸಲಾಗುವದು.