ಮಡಿಕೇರಿ, ಜು. 18: ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸಿಎ-ಸಿಪಿಟಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿನಿ, ಮೂಡಬಿದಿರೆಯ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತವಿಶಿ ದೇಚಮ್ಮ 200ಕ್ಕೆ 191 (ಶೇ.95.50) ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ದ್ವಿತೀಯ ಹಾಗೂ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲೂ ಕೂಡ ತವಿಶಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದರು. ಈಕೆ ಮಡಿಕೇರಿಯ ವಕೀಲ ಪ್ರೀತಂ ಹಾಗೂ ಹೇಮಾಪ್ರೀತಂ ಅವರ ಪುತ್ರಿ.