ಮಡಿಕೇರಿ, ಜು. 19: ದಿನದ 24 ಗಂಟೆ 365 ದಿನಗಳ ಕಾಲ ಸಮಾಜದ ರಕ್ಷಣೆ, ಸಮಾಜದಲ್ಲಿ ಕಾನೂನು ಪಾಲನೆ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಡಿಪಾಗಿರಿಸಿಕೊಂಡಿರುವ ಆರಕ್ಷಕ ಸಿಬ್ಬಂದಿಗಳು ಹಾಗೂ ಅವರ ಕುಟುಂಬಸ್ಥರು ಕೆಲಕಾಲ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡರು. ದಿನನಿತ್ಯದ ಜಂಜಾಟವನ್ನೆಲ್ಲ ಮರೆತು ಸಾಂಸ್ಕøತಿಕ ಕಲಾಪದಲ್ಲಿ ಮೈಮರೆತರು. ಭಾನುವಾರ ಸಂಜೆ ಪೊಲೀಸರು ಹಾಗೂ ಕುಟುಂಬದವರಿಗಾಗಿ ಏರ್ಪಡಿಸಲಾಗಿದ್ದ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಿತ, ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಕ್ಷಕ ಪರಿವಾರದವರು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಿ, ಚಪ್ಪಾಳೆ ಗಿಟ್ಟಿಸಿಕೊಂಡರು. -ಸಂತೋಷ್.