ಮಡಿಕೇರಿ, ಜು.19 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘÀದ ವತಿಯಿಂದ ತಾ.22 ರಂದು ‘ಕೊಡಗು ಅಪರಂಜಿ ಪ್ರಶಸ್ತಿ’ ಹಾಗೂ ‘ಕೊಡಗು ಮಯೂರ ಪ್ರಶಸ್ತಿ’ ಪ್ರದಾನ ಮತ್ತು 10ನೇ ತರಗತಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಶನಿವಾರ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. 2016-17ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕನ್ನಡ ಬರೆಯುವ ಸ್ಪರ್ಧೆಯನ್ನು ನಡೆಸಿದ್ದು, ವಿಜೇತರಿಗೆ ಕೊಡಗು ಅಪರಂಜಿ ಪ್ರಶಸ್ತಿ, ಹಾಗೂ ಪದವಿ ಪೂರ್ವ ಕಾಲೆÉೀಜಿನ ವಿಜೇತ ವಿದ್ಯಾರ್ಥಿಗಳಿಗೆ ಕೊಡಗು ಮಯೂರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.
10ನೇ ತರಗತಿಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕಗಳನ್ನು ಪಡೆದ ಎಂಟು ವಿದ್ಯಾರ್ಥಿಗಳು, ಸೆಂಟ್ರಲ್ ಸಿಲಬಸ್ನ 18 ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಶೇ.99 ರಷ್ಟು ಅಂಕಗಳಿಸಿದ ನಾಲ್ಕು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವದೆಂದು ತಿಳಿಸಿದರು.
ತಾ.22 ರಂದು ಮಧ್ಯಾಹ್ನ 2.30 ಗಂಟೆಗೆ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ದೂರದರ್ಶನ ಚಂದನ ವಾಹಿನಿಯ ಥಟ್ ಅಂತ ಹೇಳಿ ಕಾರ್ಯಕ್ರಮ ನಿರೂಪಕ ಡಾ.ನಾ. ಸೋಮೇಶ್ವರ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ.
(ಮೊದಲ ಪುಟದಿಂದ) ಮುಖ್ಯ ಅತಿಥಿಗಳಾಗಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಕೊಕ್ಕಲೆರ ಅಯ್ಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಸ್ವಾಮಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ.ಸುರೇಶ್ ಉಪಸ್ಥಿತರಿರುವರು.
ಇದೇ ಸಂದರ್ಭ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘÀದ ಲೇಖಕರುಗಳು ಹೊರ ತರುತ್ತಿರುವ “ಕಥಾ ಗುಚ್ಛ” ಕಥಾ ಸಂಕಲನವನ್ನು ಬಿಡುಗಡೆ ಮಾಡಲಾಗುವದೆಂದು ಲೋಕೇಶ್ ಸಾಗರ್ ತಿಳಿಸಿದರು.
ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘÀದ ಅಧ್ಯಕೆÀ್ಷ ಕಸ್ತೂರಿ ಗೋವಿಂದಮ್ಮಯ್ಯ ಅವರ ಗೌರವ ಉಪಸ್ಥಿತಿಯಲ್ಲಿ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮಟ್ಟದ ಸ್ಪರ್ಧೆಗಳ ಸಮಿತಿ ಸಂಚಾಲಕ ಹೆಚ್.ಹೆಚ್. ಸುಂದರ್ ಅವರನ್ನು ಸನ್ಮಾನಿಸಲಾಗುವದೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಖಜಾಂಚಿ ಸವಿತಾ ರೈ, ಜಿಲ್ಲಾ ಕಸಾಪ ಹಿರಿಯ ಸದಸ್ಯ ಹೆಚ್.ಹೆಚ್.ಸುಂದರ್ ಉಪಸ್ಥಿತರಿದ್ದರು.