ಮಡಿಕೇರಿ, ಜು.19: ದಾವಣಗೆರೆಯಲ್ಲಿ ನಡೆಯಲಿರುವ 3ನೇ ವಿಶ್ವ ಕನ್ನಡ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುವದರೊಂದಿಗೆ ಅರೆಭಾಷೆ ಸಮುದಾಯದ ವಿಶಿಷ್ಟ ಸಂಸ್ಕøತಿಯನ್ನು ಪರಿಚಯಿಸಲು ಕ್ರಮಕೈಗೊಳ್ಳುವದಾಗಿ ಕರ್ನಾಟಕ ಅರೆ ಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಹೇಳಿದ್ದಾರೆ.ಬೆಂಗಳೂರಿನ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಈ ಆಶ್ವಾಸನೆ ನೀಡಿದ್ದಾರೆ.
ಕರ್ನಾಟಕ ಅರೆಭಾಷೆ ಅಕಾಡೆಮಿ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ ಗಿರೀಶ್ ಅವರು, ಕನ್ನಡದ ಸಹೋದರ ಭಾಷೆಯಾಗಿರುವ ಅರೆಭಾಷೆ ಮತ್ತು ಸಮುದಾಯ ವಿಶಿಷ್ಟ ಸಂಸ್ಕøತಿ, ಸಂಪ್ರದಾಯ, ಆಚಾರ- ವಿಚಾರಗಳನ್ನು ಹೊಂದಿದ್ದು, ವಿಶ್ವಕನ್ನಡ ಸಮ್ಮೇಳನದಲ್ಲಿ ಈ ಸಮುದಾಯದ ಅಪರೂಪದ ಸಂಸ್ಕøತಿಯನ್ನು ಹೊರ ಜಗತ್ತಿಗೆ ಪರಿಚಯಿಸಲು ಪ್ರಯತ್ನ ಮಾಡಲಾಗುವದು ಎಂದರು.
(ಮೊದಲ ಪುಟದಿಂದ) ಇಂದಿನ ತಾಂತ್ರಿಕ ಯುಗದಲ್ಲಿ ವಿಶ್ವ ಮಟ್ಟದಲ್ಲಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸುವ ನಿಟ್ಟಿನಲ್ಲಿ ಆಯೋಜಿತವಾಗಿರುವ 3ನೇ ವಿಶ್ವಕನ್ನಡ ಸಮ್ಮೇಳನದ ಯಶಸ್ಸಿಗೆ ಅಗತ್ಯ ಸಹಕಾರ ನೀಡುವದಾಗಿ ಭರವಸೆ ನೀಡಿದರು.
ಸಭೆಯಲ್ಲಿ ವಿವಿಧ ಭಾಷಾ ಅಕಾಡೆಮಿಗಳ ಅಧ್ಯಕ್ಷರುಗಳು, ಪ್ರಾಧಿಕಾರದ ಪ್ರಮುಖರು, ಸಚಿವರುಗಳಾದ ಹೆಚ್.ಕೆ. ಪಾಟೀಲ್, ಪ್ರಿಯಾಂಕ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ, ಉಮಾಶ್ರೀ, ಎಂ.ಆರ್. ಸೀತಾರಾಂ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಮಂದ್ರೀರ ಮೋಹನ್ ದಾಸ್ ಮತ್ತಿತರರು ಪಾಲ್ಗೊಂಡಿದ್ದರು.