ನಾಪೆÉÇೀಕ್ಲು, ಜು. 19: ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿರುವ ಕಾಲ ಘಟ್ಟದಲ್ಲಿ ಡಾ. ನವೀನ್ ಕುಮಾರ್, ನಾಪೆÇೀಕ್ಲು ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ. ಉಮಾಭಾರತಿ ನರೇಂದ್ರ ಅವರ ಸೇವೆ ಪ್ರಶಂಸನೀಯ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಅನಿಲ್ ಎಚ್.ಟಿ. ಹೇಳಿದರು.
ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ, ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ 50 ನೇ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಕಳೆದ 12 ವರ್ಷಗಳಿಂದ ಸಂಸ್ಥೆ ವತಿಯಿಂದ ಆರೋಗ್ಯ, ಶಿಕ್ಷಣ ಮತ್ತು ಸಮಾಜ ಸೇವೆಗೆ ಪ್ರಾಮುಖ್ಯತೆ ನೀಡಲಾಗಿದೆ. ಕಳೆದ ಐದು ವರ್ಷದಲ್ಲಿ ರೋಟರಿ ಸಹಯೋಗದೊಂದಿಗೆ ನಾಪೆÇೀಕ್ಲುವಿ ನಲ್ಲಿ ಸುಮಾರು 50 ಕುಟುಂಬ ಕಲ್ಯಾಣ ಶಿಬಿರಗಳನ್ನು ನಡೆಸಿ ಯಶಸ್ವಿಯನ್ನು ಸಾಧಿಸಲಾಗಿದೆ ಎಂದು ಮಿಸ್ಟಿ ಹಿಲ್ಸ್‍ನ ಅಧ್ಯಕ್ಷ ಎಚ್.ಟಿ. ಅನಿಲ್ ಮೆಚ್ಚುಗೆ ವ್ಯಕ್ತವ್ಯಪಡಿಸಿದರು.
ಜಿಲ್ಲೆಯಲ್ಲಿ ವ್ಯೆದ್ಯರ ಕೊರತೆ ಇದ್ದು, ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿರು ವದು ಸಮಸ್ಯೆಗೆ ಕಾರಣವಾಗಿದೆ. ಗ್ರಾಮೀಣ ಪ್ರದೇಶದ ಸೇವೆ ದೇವರ ಸೇವೆ ಎಂದು ಪರಿಗಣಿಸಿ ವೈದ್ಯರು ಮುಂದೆ ಬರಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ. ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ರೋಟರಿ ಮಿಸ್ಟಿ ಹಿಲ್ಸ್‍ನ ಡಾ. ನವೀನ್ ಕುಮಾರ್ ಕುಲ್ಲೇಟಿರ ಅಜಿತ್ ನಾಣಯ್ಯ ಮಾತನಾಡಿದರು. ಶಸ್ತ್ರ ಚಿಕಿತ್ಸೆಗೆ ದಾಖಲಾಗಿರುವ ಮಹಿಳೆಯರಿಗೆ ಪ್ರೋತ್ಸಾಹ ಬಹುಮಾನ ನೀಡ ಲಾಯಿತು. ವೇದಿಕೆಯಲ್ಲಿ ಚೆಲ್ಮಾಂಡ ಸತೀಶ್ ಸೋಮಣ್ಣ, ಡಾ. ಉಮಾ ಭಾರತಿ ನರೇಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೇಮಾವತಿ ಇದ್ದರು.