ಕುಶಾಲನಗರ, ಜು. 20: ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸಭೆ ಇತ್ತೀಚೆಗೆ ನಡೆಯಿತು.
ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾ. 22 ರಂದು ಪತ್ರಿಕಾ ದಿನಾಚರಣೆ ಮತ್ತು ಪರಿಸರ ಸಂರಕ್ಷಣೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸ್ಥಳೀಯ ವಿವೇಕಾನಂದ ಕಾಲೇಜಿನ ಸಭಾಂಗಣದಲ್ಲಿ ಅಂದು 12 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಸಾಧಕರಿಗೆ ಸನ್ಮಾನ, ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರ ಸಂಘದ ಸದಸ್ಯರು ಅಧ್ಯಯನ ಪ್ರವಾಸ ಕಾರ್ಯಕ್ರಮ, ಮಹಾಸಭೆ, ಸಂಘದ ಸದಸ್ಯರಿಗೆ ನಿವೇಶನ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕೆ. ನಾಗರಾಜಶೆಟ್ಟಿ, ಕಾರ್ಯಕ್ರಮ ಸಂಯೋಜಕ ಕೆ.ಎಸ್. ಮೂರ್ತಿ, ನಿರ್ದೇಶಕರುಗಳಾದ ಪಿ.ಬಿ. ಸುನೀಲ್, ರಘು ಹೆಬ್ಬಾಲೆ, ಅಶ್ವಥ್, ವಿನೋದ್, ಸಬಲಂ ಭೋಜಣ್ಣ ರೆಡ್ಡಿ ಇದ್ದರು.