ಮೂರ್ನಾಡು, ಜು. 20: ಪಾರಾಣೆ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸರಕಾರದಿಂದ ನೀಡುವ ನೋಟ್ ಪುಸ್ತಕಗಳನ್ನು ಪಾರಾಣೆ ಪ್ರೌಢಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪೆಬ್ಬಾಟಂಡ ಪೆಮ್ಮಯ್ಯ ವಿದ್ಯಾರ್ಥಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಇಂದು ಸರಕಾರ ಅನೇಕ ಉಪಯುಕ್ತ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯೆಯತ್ತ ಹೆಚ್ಚಿನ ಗಮನ ಹರಿಸುವಂತೆ ಕರೆ ನೀಡಿದರು.
ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಬಿ.ಎ. ನಾಣಯ್ಯ, ಕಾರ್ಯದರ್ಶಿ ಎಂ.ಬಿ. ಕುಶಾಲಪ್ಪ, ನಿರ್ದೇಶಕ ಪಿ.ಎಸ್. ದೇವಯ್ಯ, ಕೊಣಂಜಗೇರಿ ಗ್ರಾಮ ಪಂಚಾಯಿತಿ ಸದಸ್ಯ ಕುಟ್ಟಯ್ಯ, ಶಾಲಾ ಮುಖ್ಯ ಶಿಕ್ಷಕಿ ರಜನಿ ಹಾಗೂ ನಿಲಯದ ಸಿಬ್ಬಂದಿ ವರ್ಗದವರು ಹಾಜರಿದ್ದರು.