ಮಡಿಕೇರಿ, ಜು. 20: ರಾಷ್ಟ್ರದ 14ನೇ ರಾಷ್ಟ್ರಪತಿಯಾಗಿ ರಾಮ್‍ನಾಥ್ ಕೋವಿಂದ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಬಿಜೆಪಿ ವತಿಯಿಂದ ಇಂದು ಇಲ್ಲಿನ ಇಂದಿರಾಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ಕಾರ್ಯಕರ್ತರು ಸಿಹಿಹಂಚಿ ಸಂಭ್ರಮ ಹಂಚಿಕೊಂಡರು. ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ತಾಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಬಿ.ಎಸ್. ಪ್ರಶಾಂತ್, ಎಸ್.ಸಿ. ಮೋರ್ಚಾದ ಸತೀಶ್, ಬಿ.ಕೆ. ಜಗದೀಶ್, ನಗರಸಭಾ ಸದಸ್ಯರಾದ ಕೆ.ಎಸ್. ರಮೇಶ್, ಉಣ್ಣಿಕೃಷ್ಣ, ಟಿ.ಎಸ್. ಪ್ರಕಾಶ್ ಇನ್ನಿತರರಿದ್ದರು.
ಕುಶಾಲನಗರ
ಭಾರತದ 14ನೇ ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮ್‍ನಾಥ್ ಕೋವಿಂದ್ ಆಯ್ಕೆಯಾದ ಹಿನೆÀ್ನಲೆಯಲ್ಲಿ ಬಿಜೆಪಿ ವತಿಯಿಂದ ಕುಶಾಲನಗರದಲ್ಲಿ ಸಂಭ್ರಮಾಚರಣೆ ನಡೆಯಿತು.
ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಬಿಜೆಪಿ ಪಕ್ಷ ಹಾಗೂ ರಾಮ್‍ನಾಥ್ ಕೋವಿಂದ್ ಅವರಿಗೆ ಜೈಕಾರ ಹಾಕಿದರು. ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಆರ್. ಮಂಜುಳಾ, ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಎಂ.ಎಂ. ಚರಣ್, ಸದಸ್ಯ ಹೆಚ್.ಎಂ. ಮಧುಸೂದನ್, ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್, ನಗರ ಘಟಕದ ಅಧ್ಯಕ್ಷ ಕೆ.ಜಿ. ಮನು, ಉಪಾಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕಾರ್ಯದರ್ಶಿ ಶಿವಾಜಿರಾವ್, ಯುವಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ನಗರ ಘಟಕ ಕಾರ್ಯದರ್ಶಿ ನಿಡ್ಯಮಲೆ ದಿನೇಶ್, ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಸದಸ್ಯೆ ಸುಶೀಲಾ, ನಗರ ಘಟಕ ಅಧ್ಯಕ್ಷ ಸೋಮೇಶ್, ಪ್ರಮುಖರಾದ ವಿ.ಎನ್. ವಸಂತ ಕುಮಾರ್, ಎಂ.ಎನ್. ಕುಮಾರಪ್ಪ, ಜಿ.ಎಲ್. ನಾಗರಾಜ್ ಮತ್ತಿತರರು ಇದ್ದರು.
ಸೋಮವಾರಪೇಟೆ
ಭಾರತದ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಭಾರೀ ಮತಗಳ ಅಂತರದಿಂದ ನೇಮಕಗೊಂಡ ಹಿನ್ನೆಲೆ ಸೋಮವಾರಪೇಟೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಪಕ್ಷದ ಮುಖಂಡರಿಗೆ ಜಯಘೋಷಗಳನ್ನು ಮೊಳಗಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ತಾ.ಪಂ. ಸದಸ್ಯ ಧರ್ಮಪ್ಪ, ಪಕ್ಷದ ಮುಖಂಡರು ಗಳಾದ ಹೆಚ್.ಕೆ. ಮಾದಪ್ಪ, ನಳಿನಿ ಗಣೇಶ್, ಜೆ.ಸಿ. ಶೇಖರ್, ಜಲಜಾ, ಮೋಹನ್ ದಾಸ್, ಬನ್ನಳ್ಳಿ ಗೋಪಾಲ್, ಧರ್ಮಪ್ಪ, ಕಿಬ್ಬೆಟ್ಟ ಮಧು, ಮಹೇಶ್, ಕೆ.ಜಿ. ಸುರೇಶ್, ನಿರ್ವಾಣಿ ಶೆಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕೊಡ್ಲಿಪೇಟೆ: ಎನ್‍ಡಿಎ ಅಭ್ಯರ್ಥಿ ಗೆಲುವಿನ ಹಿನ್ನೆಲೆ ಕೊಡ್ಲಿಪೇಟೆಯ ಬಸವೇಶ್ವರ ದೇವಾಲಯ ಮುಂಭಾಗ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಪ್ರಸಾದ್, ತಾಲೂಕು ಎಸ್‍ಸಿ ಮೋರ್ಚಾ ಅಧ್ಯಕ್ಷ ಯೋಗೇಶ್, ಜಿ.ಪಂ. ಸದಸ್ಯೆ ಸರೋಜಮ್ಮ, ತಾ.ಪಂ. ಸದಸ್ಯೆ ಲೀಲಾವತಿ, ಬ್ಯಾಡಗೊಟ್ಟ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಕುಮಾರ್, ಪ್ರಮುಖರಾದ ಕೆ.ಎಸ್. ನಾಗರಾಜ್, ಪ್ರಸಾದ್, ಕುಮಾರ್ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.