ಗೋಣಿಕೊಪ್ಪಲು, ಜು. 21: ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಹಂತದಿಂದಲೇ ಸಂಘಟನೆ ಮಾಡುವ ಅನಿವಾರ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯರು, ಕಿರಿಯರು ಸೇರಿದಂತೆ ಸಕ್ರೀಯ ಕಾರ್ಯಕರ್ತರನ್ನು ಸಂಘಟಿಸಲು ಮೊದಲ ಆದ್ಯತೆ ನೀಡಲಾಗುವದು. ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ, ಸೇವಾದಳ ಇನ್ನಿತರ ವಿವಿಧ ವಿಭಾಗಗಳ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆಗೆ ಒತ್ತು ನೀಡಲಾಗುವದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಶಿವುಮಾದಪ್ಪ ಅಭಿಪ್ರಾಯಪಟ್ಟರು.

ಬಾಳೆಲೆ ಹೋಬಳಿ ಕಾಂಗ್ರೆಸ್ ಘಟಕದಿಂದ ಅಲ್ಲಿನ ಕೊಡವ ಸಮಾಜದ ಆವರಣದಲ್ಲಿ ಇತ್ತೀಚೆಗೆ ಜರುಗಿದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಏಳು ಘಟಕಗಳಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೊಡಗಿನ ಎರಡು ಸ್ಥಾನವನ್ನು ಮತ್ತೆ ಗೆಲ್ಲುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವದು. ಮನೆ ಮನೆಗೆ ತೆರಳಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡುವ ಕೆಲಸವೂ ಆಗಬೇಕಾಗಿದೆ. ಜಿಲ್ಲಾ ಪಂಚಾಯಿತಿ ರಸ್ತೆ ಅಭಿವೃದ್ಧಿಗೂ ಒತ್ತು ನೀಡಲಾಗುವದು. ಕಳಪೆ ಕಾಮಗಾರಿ ಆಗಿದ್ದಲ್ಲಿ ಅಲ್ಲಿನ ಕಾಂಗ್ರೆಸ್ ವಲಯಾಧ್ಯಕ್ಷರು ಮಾಹಿತಿ ನೀಡುವ ಮೂಲಕ ಜನಪರ ಕಾರ್ಯಕ್ರಮ ಅನುಷ್ಟಾನಕ್ಕೆ ಸಂಘಟಿತ ಹೋರಾಟ ಮಾಡಬೇಕಾಗುತ್ತದೆ. ಮುಂದೆ ಹೈಕಮಾಂಡ್ ಯಾರನ್ನು ವಿಧಾನ ಸಭಾ ಅಭ್ಯರ್ಥಿಯನ್ನಾಗಿ ಆರಿಸಲಿದೆಯೋ ಅವರಿಗೆ ನಿಷ್ಠರಾಗಿ, ಪಕ್ಷನಿಷ್ಠೆಯಿಂದ ವಿಧಾನ ಸಭಾ ಚುನಾವಣೆಯನ್ನು ಎದುರಿಸಲು ಎಲ್ಲಾ ಕಾಂಗ್ರೆಸ್ಸಿಗರು ಒಗ್ಗೂಡಬೇಕು. ಯಾವದೇ ಅಸಮಾಧಾನ, ಭಿನ್ನಾಭಿಪ್ರಾಯವಿದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಶಮನ ಮಾಡುವ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಭದ್ರಕೋಟೆಯನ್ನು ಪುನರ್‍ಸ್ಥಾಪಿಸುವ ಕೆಲಸ ಆಗಬೇಕಾಗಿದೆ ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ ಸನ್ಮಾನ ಸ್ವೀಕರಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 4 ವರ್ಷದ ಆಡಳಿತ ನಿಜಕ್ಕೂ ಈ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮವಾಗಿದ್ದು, ಕಳೆದ ಚುನಾವಣೆ ಸಂದರ್ಭ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಎಲ್ಲಾ ಭರವಸೆಗಳನ್ನೂ ಮುಖ್ಯ ಮಂತ್ರಿಗಳು ಈಡೇರಿಸಿದ್ದಾರೆ. ಸಿದ್ಧರಾಮಯ್ಯ ಅವರಂತಹ ದಿಟ್ಟ ನಿರ್ಧಾರ ತೆಗೆದುಕೊಳ್ಳುವ, ಪಕ್ಷಾತೀತ ಕಾರ್ಯಕ್ರಮ ಜಾರಿಗೊಳಿಸಿದ್ದು ನಿಜಕ್ಕೂ ಪ್ರಶಂಸನೀಯ. ಸಿದ್ಧರಾಮಯ್ಯ ಅವಧಿಯಲ್ಲಿ ರಾಜ್ಯದ ಎಲ್ಲೆಡೆ ಬಡವರಿಗೆ ಸೂರು ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾಧಿಕಾರಿ ಗಳು, ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ನಿವೇಶನರಹಿತರನ್ನು ಗುರುತಿಸಿ, ವಸತಿ ವ್ಯವಸ್ಥೆ ಕಲ್ಪಿಸಲು ಸಮರೋಪಾದಿಯಲ್ಲಿ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ವೀರಾಜಪೇಟೆ ಹಾಗೂ ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಂಯುಕ್ತವಾಗಿ ತಾ.30 ರಂದು ವೀರಾಜಪೇಟೆ ಮಹಿಳಾ ಸಮಾಜದಲ್ಲಿ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಲಾಗುವದು. ಕಳೆದ 15 ವರ್ಷದಿಂದ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲದೆ ಪರದಾಟ ಅನುಭವಿಸಿದ್ದು, ಮುಂದಿನ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗ ಬೇಕಾಗಿದೆ ಎಂದು ಹೇಳಿದರು.

ಜಿ.ಪಂ.ಸದಸ್ಯ ಬಾನಂಡ ಪ್ರಥ್ಯು ಮಾತನಾಡಿ, ಜಿಲ್ಲೆಯಲ್ಲಿ ಹುಲಿ, ಆನೆ, ಮಾನವ ಸಂಘರ್ಷ ಬಗೆಹರಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಮಂತ್ರಿಗಳೊಂದಿಗೆ ಇತ್ತೀಚೆಗೆ ಗಂಭೀರ ಮಾತುಕತೆ ನಡೆಸಲಾಗಿದೆ. ಅಭಿವೃದ್ಧಿಪರ ಕಾಮಗಾರಿಯನ್ನು ಹಾಕಿಕೊಂಡು ಜನರ ವಿಶ್ವಾಸ ಗಳಿಸಬೇಕಾಗಿದೆ. ಕೊಡಗಿನ ಅಭಿವೃದ್ಧಿಯ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೂ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದನ್ನು ಮತದಾರರಿಗೆ ಮನವರಿಕೆ ಮಾಡುವ ಕೆಲಸ ಆಗಬೇಕು ಎಂದು ಅಭಿಪ್ರಾಯ ಪಟ್ಟರು.

ಸಭೆಯಲ್ಲಿ ಪೆÇನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಡೇಮಾಡ ಕುಸುಮಾಜೋಯಪ್ಪ, ಮಲಚೀರ ನಾಣಯ್ಯ, ಮಾಜಿ ಜಿ.ಪಂ.ಸದಸ್ಯ ಮೂಕಳೇರ ಕುಶಾಲಪ್ಪ, ಟಿಪ್ಪು ಬಿದ್ದಪ್ಪ ಮಾತನಾಡಿದರು. ತೀತಿರ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಅರುಣ್‍ಮಾಚಯ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವುಮಾದಪ್ಪ ಅವರನ್ನು ಬಾಳೆಲೆ, ನಿಟ್ಟೂರು ಹಾಗೂ ಪೆÇನ್ನಪ್ಪಸಂತೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟುಮೊಣ್ಣಪ್ಪ, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ತಿತಿಮತಿ ಜಿ.ಪಂ.ಸದಸ್ಯೆ ಪಿ.ಆರ್.ಪಂಕಜ, ಗ್ರಾ.ಪಂ. ಅಧ್ಯಕೆÀ್ಷ ಕಾಡ್ಯಮಾಡ ಅನಿತಾ, ಕೊಕ್ಕೇಂಗಡ ರಂಜನ್, ಕುಟ್ಟ ತಾ.ಪಂ. ಸದಸ್ಯ ಪಲ್ವಿನ್ ಪೂಣಚ್ಚ, ನಿಟ್ಟೂರು ಗ್ರಾ.ಪಂ. ಅಧ್ಯಕ್ಷ ಪೆÇೀರಂಗಡ ಪವನ್ ಚಿಟ್ಟಿಯಪ್ಪ, ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ಹೆಚ್.ಎನ್. ಮುರುಘನ್, ಬಾಳೆಲೆ ಹೋಬಳಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಆದೇಂಗಡ ವಿನು ಉತ್ತಪ್ಪ, ಹಿರಿಯ ಕಾಂಗ್ರೆಸ್ಸಿಗರಾದ ಟಿ.ಪಿ.ದೇವಯ್ಯ, ಆದೇಂಗಡ ನಳ ಮುಂತಾದವರು ಉಪಸ್ಥಿತರಿದ್ದರು.

-ವರದಿ: ಟಿ.ಎಲ್.ಶ್ರೀನಿವಾಸ್