ಸುಂಟಿಕೊಪ್ಪ, ಜು. 21: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಬಳಸಿಕೊಂಡರೆ ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಇಲ್ಲಿನ ಸರಕಾರಿ ಪ್ರೌಢಶಾಲೆಯ 2017-18ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಠಪ್ರವಚನದ ಜೊತೆಗೆ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ಕೊಡುವದನ್ನು ಕಲಿಯಬೇಕೆಂದರು.ಉಪ ಪ್ರಾಂಶುಪಾಲ ಬಾಲಕೃಷ್ಣ, ಮುಖ್ಯ ಆತಿಥಿಗಳಾಗಿದ್ದ ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಮಾತನಾಡಿದರು.

ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾ ಮೇದಪ್ಪ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೊಮಶೇಖರ್, ವಿಜ್ಞಾನ ಪರಿಷತ್ ಕಾರ್ಯದರ್ಶಿ ಟಿ.ಜಿ. ಪ್ರೇಮ್‍ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಸಿ.ಟಿ. ಸೋಮಶೇಖರ್ ಪ್ರತಿಜ್ಞಾವಿಧಿ ಭೋದಿಸಿದರು.