ಮಡಿಕೇರಿ, ಜು. 21: 2016-17ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕನ್ನಡ ಬರೆಯುವ ಸ್ಪರ್ಧೆಯಲ್ಲಿ ವಿಜೇತರಿಗೆ ‘ಕೊಡಗು ಅಪರಂಜಿ ಪ್ರಶಸ್ತಿ’ ಪ್ರದಾನ ಹಾಗೂ 2016-17ನೇ ಸಾಲಿನ ಪ.ಪೂ. ವಿದ್ಯಾರ್ಥಿಗಳಿಗೆ ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆಯಲ್ಲಿ ವಿಜೇತರಿಗೆ ‘ಕೊಡಗು ಮಯೂರ ಪ್ರಶಸ್ತಿ’ ಪ್ರದಾನ ಹಾಗೂ 2016-17ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪ.ಪೂ. ಪರೀಕ್ಷೆಯ ಕನ್ನಡ ಭಾಷೆ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ತಾ. 22 ರಂದು (ಇಂದು) ವಿಧಾನಸಭಾ ಸಭಾಂಗಣ, ಕೋಟೆ ಆವರಣದಲ್ಲಿ ಮಧ್ಯಾಹ್ನ 2.30 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ದೂರದರ್ಶನ ಚಂದನ ಬೆಂಗಳೂರು ಕೇಂದ್ರದ ‘ಥಟ್ ಅಂತ ಹೇಳಿ’ ರಸಪ್ರಶ್ನೆ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಕುಟ್ಟಪ್ಪ, ಕೆ. ನಿಡುಗಣೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೊಕ್ಕಲೆರ ಅಯ್ಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ. ಸ್ವಾಮಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ‘ಕಥಾ ಗುಚ್ಚ’ (ಕಥಾ ಸಂಕಲನ) ಬಿಡುಗಡೆಯಾಗಲಿದೆ. ಕಸಾಪ ಜಿಲ್ಲಾ ಮಟ್ಟದ ಸ್ಪರ್ಧೆಗಳ ಸಮಿತಿ ಸಂಚಾಲಕ ಹೆಚ್.ಹೆಚ್. ಸುಂದರ್ ಅವರನ್ನು ಸನ್ಮಾನಿಸಲಾಗುವದು.

ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಕಸ್ತೂರಿ ಗೋವಿಂದಮ್ಮಯ್ಯ ಉಪಸ್ಥಿತರಿರಲಿದ್ದಾರೆ.