ಮಡಿಕೇರಿ, ಜು. 22: ಇತರ ರಾಜಕೀಯ ಪಕ್ಷಗಳಲ್ಲಿರುವಂತೆ ಜಾತ್ಯತೀತ ಜನತಾದಳದಲ್ಲಿ ದೊಡ್ಡ ಮಟ್ಟದ ಭಿನ್ನಾಭಿಪ್ರಾಯಗಳಿಲ್ಲವೆಂದು ಸ್ಪಷ್ಟಪಡಿಸಿರುವ ಪಕ್ಷದ ಜಿಲ್ಲಾ ಉಸ್ತುವಾರಿ ವಿ.ಎಂ.ವಿಜಯ, ತಟಸ್ಥರು ಮತ್ತು ಸಕ್ರಿಯರೆಲ್ಲ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡೆಸುವ ಮೂಲಕ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಎಂ.ವಿಜಯ, ತಾ. 27 ರಂದು ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ತಟಸ್ಥರು ಕೂಡ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಕೆ.ಎಂ. ಗಣೇಶ್ ಸೇರಿದಂತೆ ಕಾಂಗ್ರೆಸ್‍ನ ಅನೇಕರು ಜೆಡಿಎಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ.

ಸಭೆÉಯಲ್ಲಿ ಮಾಜಿ ಸಂಸದ ಹೆಚ್. ವಿಶ್ವನಾಥ್, ಶಾಸಕ ಜಿ.ಟಿ .ದೇವೇಗೌಡ, ಮಾಜಿ ಶಾಸಕರಾದ ಶಿವಕುಮಾರ್, ಹೆಚ್.ಡಿ. ಬಸವರಾಜು, ಬಿ.ಎ. ಜೀವಿಜಯ ಮತ್ತಿತರರು ಪಾಲ್ಗೊಳ್ಳಲಿದ್ದು, ಪಕ್ಷ ಸಂಘಟನೆಯ ಕುರಿತು ನಿರ್ಣಯಗಳನ್ನು ಕೈಗೊಳ್ಳಲಾಗುವದು. ಜೀವಿಜಯ ಅವರ ನೇತೃತ್ವದಲ್ಲೇ ಪಕ್ಷವನ್ನು ಮುನ್ನಡೆಸಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುವದೆಂದು ತಿಳಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಜೀವಿಜಯ ಸ್ಪರ್ಧಿಸುವದು ಖಚಿತ. ವೀರಾಜಪೇಟೆ ಕ್ಷೇತ್ರಕ್ಕೂ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದು, ಎರಡೂ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಪಕ್ಷಕ್ಕೆ ಇದೆಯೆಂದು ವಿ.ಎಂ. ವಿಜಯ ತಿಳಿಸಿದರು.

ಜೀವಿಜಯ ಅವರ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಜೆಡಿಎಸ್ ತೊರೆಯುತ್ತಾರೆ ಎಂದು ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ಜೆಡಿಎಸ್ ಬೆಳವಣಿಗೆಯನ್ನು ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ವಿ.ಎಂ.ವಿಜಯ ಟೀಕಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಯಾವದೇ ಗೊಂದಲ ವಿಲ್ಲ. ಸಂಕೇತ್ ಪೂವಯ್ಯ ಅವರೇ ಜಿಲ್ಲಾಧ್ಯಕ್ಷರಾಗಿ ಮುಂದುವರೆದಿದ್ದು, ಪಕ್ಷದಲ್ಲಿ ಇವರು ಹೇಗೆ ತೊಡಗಿಸಿ ಕೊಂಡಿದ್ದಾರೆ ಎನ್ನುವ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿ ದ್ದಾರೆ. ಜಿಲ್ಲಾಧ್ಯಕ್ಷರು ಬದಲಾಗಿಲ್ಲ ವೆಂದು ಸ್ಪಷ್ಟಪಡಿಸಿದ ವಿ.ಎಂ.ವಿಜಯ, ಜಿಲ್ಲಾಧ್ಯಕ್ಷರ ಆಯ್ಕೆ ತೀರ್ಮಾನ ವರಿಷ್ಠರಿಗೆ ಬಿಟ್ಟದ್ದು ಎಂದರು.

ಮಡಿಕೆÉೀರಿ ನಗರಸಭೆಯಲ್ಲಿರುವ ಏಕೈಕ ಜೆಡಿಎಸ್ ಸದಸ್ಯೆ ಸಂಗೀತ ಪ್ರಸನ್ನ ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲವೆಂದು ಸ್ಪಷ್ಟಪಡಿಸಿದರು.

ಜೆಡಿಎಸ್ ನಗರ ಮುಖಂಡ ಎಸ್.ಐ. ಮುನೀರ್ ಅಹಮ್ಮದ್ ಮಾತನಾಡಿ, ಜೆಡಿಎಸ್ ಪಕ್ಷವನ್ನು ಬಲಯುತಗೊಳಿಸುವ ಮೂಲಕ ಎರಡೂ ಕ್ಷೇತ್ರಗಳನ್ನು ಗೆಲ್ಲುವದಕ್ಕಾಗಿ ಒಗ್ಗಟ್ಟನ್ನು ಪ್ರದರ್ಶಿಸುವದಾಗಿ ತಿಳಿಸಿದರು.

ಕಾಂಗ್ರೆಸ್ ಮಾತ್ರವಲ್ಲದೆ ಬಿಜೆಪಿಯ ಕೆಲವರು ಜೆಡಿಎಸ್‍ಗೆ ಸೇರ್ಪಡೆಗೊಳ್ಳುವ ಬಗ್ಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ ಅವರು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿದ್ದ ಮನ್ಸೂರ್ ಆಲಿ ಇನ್ನೂ ಜೆಡಿಎಸ್ ಪಕ್ಷದಲ್ಲೆ ಇದ್ದಾರೆ. ಅವರಿಗೆ ಆಗಿದ್ದ ಬೆÉೀಸರ ಇದೀಗ ದೂರವಾಗಿದೆ, ಅಲ್ಲದೆ ಅವರ ರಾಜಿನಾಮೆಯನ್ನು ಅಂಗೀಕರಿಸಿಲ್ಲವೆಂದು ಸ್ಪಷ್ಟಪಡಿಸಿದರು.

ಸಂಕೇತ್ ಪÀÇವಯ್ಯ ಅವರ ಬಗ್ಗೆ ಸ್ಪಷ್ಟನೆ ನೀಡಿದ ಮುನೀರ್ ಅಹಮ್ಮದ್, ಬೂತ್ ಸಮಿತಿಗಳನ್ನು ರಚಿಸದೆ ಇದ್ದ ಕಾರಣಕ್ಕಾಗಿ ಜಿಲ್ಲಾಧ್ಯಕ್ಷ ಸ್ಥಾನದ ವಿಚಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿತ್ತು ಎಂದು ಸಮರ್ಥಿಸಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಡಿಕೆÉೀರಿ ನಗರ ಜೆಡಿಎಸ್ ಅಧ್ಯಕ್ಷ ಬಿ.ವೈ. ರಾಜೇಶ್, ನಗರಸಭಾ ಮಾಜಿ ಸದಸ್ಯ ಅಶ್ರಫ್ ಹಾಗೂ ಪ್ರಮುಖರಾದ ಅಣ್ಣಯ್ಯ ಉಪಸ್ಥಿತರಿದ್ದರು.