ಮಡಿಕೇರಿ, ಜು. 23: ಪ್ರಸಕ್ತ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಕೊಡಗು ಜಿಲ್ಲೆಗೆ 51 ಭೌತಿಕ ಗುರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವತಿಯಿಂದ ನಿಗದಿಪಡಿಸಲಾಗಿದೆ. ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 45 ವರ್ಷ ವಯೋಮಿತಿಗೊಳಪಟ್ಟು ವಾರ್ಷಿಕ ಆದಾಯ ರೂ. 40 ಸಾವಿರ ಅಥವ ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ. ವಿಶೇಷ ವರ್ಗದ ಮಹಿಳೆಯರಿಗೆ ಅಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ. 50 ಅಥವ ರೂ. 50 ಸಾವಿರ, ವಿಧವೆ, ಸಂಕಷ್ಟದಲ್ಲಿರುವ ಮಹಿಳೆಯರು, ವಿಕಲಚೇತನರುಗಳಿಗೆ ಶೇ. 30 ಅಥವಾ ಗರಿಷ್ಠ ರೂ. 10 ಸಾವಿರ ಹಾಗೂ ಇತರೆ ವರ್ಗದವರಿಗೆ ಶೇ. 20 ಅಥವ ಗರಿಷ್ಠ ರೂ. 7,500 ಸಹಾಯ ಧನ ನೀಡಲಾಗುವದು. ಜಿಲ್ಲೆಯ ಮೂರು ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು, ಅರ್ಹ ಮಹಿಳೆಯರು ಆಯಾಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 15 ರೊಳಗೆ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 15 ರೊಳಗೆ ಆಯಾಯ ತಾಲೂಕುಗಳಲ್ಲಿ ನಡೆಯುವ ಆಯ್ಕೆ ಸಂದರ್ಶನದಲ್ಲಿ ಭಾಗವಹಿಸುವಂತೆ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆರ್ಥಿಕ ಸಬಲೀಕರಣಕ್ಕಾಗಿ ಪ್ರಯತ್ನಿಸುವಂತೆ ಕೋರಿದೆ.
ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರೇಸ್ ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ. ದೂ. 08272-228197/9686280372, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರಾಜ ಕಮಲ್ ಕಟ್ಟಡ, ಸಿ.ಕೆ. ಸುಬ್ಬಯ್ಯ ರಸ್ತೆ, ಬಸ್ ನಿಲ್ದಾಣದ ಹತ್ತಿರ, ಸೋಮವಾರಪೇಟೆ, ದೂ. 08276-282281/ 9686280372 ಹಾಗೂ ವೀರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ, ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು, ಪೊನ್ನಂಪೇಟೆ. ದೂ. 08274-249010/ 9686280372 ಇಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರಕ್ಕೆ
ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ 2016-17ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಅಧಿಕ ಅಂಕಗಳಿಸಿದ ವೀರಶೈವ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಕಾಂತರಾಜ್ ತಿಳಿಸಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳು ಸ್ವವಿವರಗಳೊಂದಿಗೆ ಇತ್ತೀಚಿನ ಭಾವಚಿತ್ರ, ದೃಡೀಕರಿಸಿದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದೊಂದಿಗೆ ತಾ. 25ರೊಳಗೆ ಅಖಿಲ ಭಾರತ ವೀರಶೈವ ಮಹಾಸಭಾ, ನಂ.17/4, ವೀರಶೈವ-ಲಿಂಗಾಯತ ಭವನ, ಸದಾಶಿವನಗರ, ಬೆಂಗಳೂರು-560080 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ
ನ್ಯಾಷನಲ್ ಇ ಸ್ಕಾಲರ್ಷಿಪ್ ಯೋಜನೆಯಡಿ ವಿಕಲಚೇತನರ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅಭ್ಯರ್ಥಿಗಳು ನವೀಕರಿಸಲು ತಾ. 31 ಕೊನೆಯ ದಿನ. ಪ್ರಿ ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಹಾಗೂ ಪೋಸ್ಟ್-ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ. ಅರ್ಹ ಅಭ್ಯರ್ಥಿಗಳು ಇದರ ಸೌಲಭ್ಯವನ್ನು ಹೊಂದಿಕೊಳ್ಳಲು ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿ ರಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆಯ ವಿಕಲಚೇತನರ ಸಹಾಯವಾಣಿಯ ದೂರವಾಣಿ ಸಂಖ್ಯೆ.08272-222830ನ್ನು ಸಂಪರ್ಕಿಸಬಹುದಾಗಿದೆ.